ಬೆಂಗಳೂರು: ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕರ ವರ್ಗಾವಣೆಗೆ ಡಿಸೆಂಬರ್ 16 ಮತ್ತು 17 ರಂದು ಕೌನ್ಸೆಲಿಂಗ್ ನಡೆಯಲಿದೆ.
ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ಗ್ರೂಪ್ ಬಿ ವೃಂದದ ಬೆಂಗಳೂರು ಮತ್ತು ಮೈಸೂರು ವಿಭಾಗದ ವರ್ಗಾವಣೆ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ತಂತ್ರಾಂಶದ ಮೂಲಕ ಕೌನ್ಸೆಲಿಂಗ್ ನಡೆಸಲಾಗುತ್ತದೆ.
ಈ ಹಿಂದೆ ಬೆಂಗಳೂರು ಆಯುಕ್ತಾಲಯ ಕಚೇರಿಗೆ ಹಾಜರಾಗಿ ಸ್ಥಳ ಆಯ್ಕೆ ಮಾಡಿಕೊಳ್ಳಬೇಕಿತ್ತು. ಈಗ ಶಿಕ್ಷಕರ ಅನುಕೂಲಕ್ಕೆ ತಂತ್ರಾಂಶ ರೂಪಿಸಲಾಗಿದ್ದು, ಡಿಡಿಪಿಐ ಕಚೇರಿಗೆ ಹಾಜರಾಗಬಹುದಾಗಿದೆ. ಡಿಸೆಂಬರ್ 16, 17 ರಂದು ಕೌನ್ಸೆಲಿಂಗ್ ನಡೆಯಲಿದೆ.
ಶಿಕ್ಷಕರ ವರ್ಗಾವಣೆಯಿಂದ ಸರ್ಕಾರಿ ಶಾಲೆಗಳಲ್ಲಿ ಖಾಲಿಯಾಗುವ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ಜಿಲ್ಲೆಯೊಳಗೆ ಮರು ಹೊಂದಾಣಿಕೆ ಮಾಡಿಕೊಳ್ಳುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.