ಬೆಂಗಳೂರು: ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆ ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಇಂದು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಸುಗ್ರೀವಾಜ್ಞೆ ಜಾರಿ ಮೂಲಕ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಗೆ ಒಳಗಾದ ಶಿಕ್ಷಕರಿಗೆ ಕೌನ್ಸೆಲಿಂಗ್ ನಡೆಸಿ ವರ್ಗಾವಣೆಯಲ್ಲಿ ಆದ್ಯತೆ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಕರ್ನಾಟಕ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ 2020ಕ್ಕೆ ತಿದ್ದುಪಡಿ ತರುವ ಕುರಿತಂತೆ ಇಂದು ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಮಂಡನೆಯಾಗಲಿದೆ.
ಸುಗ್ರೀವಾಜ್ಞೆಗೆ ಸಚಿವ ಸಂಪುಟದ ಅನುಮೋದನೆ ಪಡೆದು ರಾಜ್ಯಪಾಲರ ಅಂಕಿತದೊಂದಿಗೆ ಸುಗ್ರೀವಾಜ್ಞೆ ಮೂಲಕ ಶಿಕ್ಷಕರ ವರ್ಗಾವಣೆ ಮಾಡಲಾಗುವುದು ಎಂದು ಹೇಳಲಾಗಿದೆ.