
ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಶೀಘ್ರದಲ್ಲೇ ಸಿಹಿ ಸುದ್ದಿ ಸಿಗಲಿದೆ. ಶಿಕ್ಷಕರ ವರ್ಗಾವಣೆಗೆ 3 -4 ದಿನಗಳಲ್ಲಿ ಮಾರ್ಗಸೂಚಿ ಬಿಡುಗಡೆಯಾಗುವ ನಿರೀಕ್ಷೆಯಿದೆ.
ಶಿಕ್ಷಕರ ವರ್ಗಾವಣೆಗೆ ಸುಗ್ರೀವಾಜ್ಞೆಯ ಮೂಲಕ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಈ ಸಂಬಂಧ ಕರಡು ರೂಪಿಸಿ ಆಕ್ಷೇಪಣೆ ಆಹ್ವಾನಿಸಲಾಗಿತ್ತು. ಒಂದು ಸಾವಿರಕ್ಕೂ ಅಧಿಕ ಆಕ್ಷೇಪಣೆ ಬಂದಿದ್ದು, ಅವುಗಳ ಪರಿಶೀಲನೆ ಕಾರ್ಯ ನಡೆದಿದೆ. ಆಕ್ಷೇಪಣೆ ಪರಿಶೀಲನೆ ಕಾರ್ಯ ಮುಗಿಯುತ್ತಿದ್ದಂತೆ ವರ್ಗಾವಣೆಗೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲು ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ ಎನ್ನಲಾಗಿದೆ.