ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಶಿಕ್ಷಕರ ವರ್ಗಾವಣೆ ಬಗೆಹರಿಯದ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಶಿಕ್ಷಕರ ವರ್ಗಾವಣೆಗೆ ಚಿಂತನೆ ನಡೆಸಲಾಗಿದೆ.
ಕಡ್ಡಾಯ ಮತ್ತು ಹೆಚ್ಚುವರಿ ವ್ಯಾಪ್ತಿಗೆ ಬರುವ 3000 ಶಿಕ್ಷಕರಿಗೆ ಸಚಿವರು ಮತ್ತು ವಿಧಾನ ಪರಿಷತ್ ಸದಸ್ಯರು ನೀಡಿದ ಭರವಸೆಯನ್ನು ಈಡೇರಿಸುವ ಉದ್ದೇಶದಿಂದ ಸುಗ್ರಿವಾಜ್ಞೆ ಜಾರಿಗೊಳಿಸಲು ಮುಂದಿನ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಹೇಳಲಾಗಿದೆ.
ವರ್ಗಾವಣೆ ಕೋರಿ 72 ಸಾವಿರ ಅರ್ಜಿಗಳು ಬಂದಿವೆ. ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಅನೇಕರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ನ್ಯಾಯಾಲಯ ವರ್ಗಾವಣೆಯ ಕಾಯ್ದೆ ಪಾಲಿಸುವಂತೆ ಸೂಚನೆ ನೀಡಿದೆ. ಶೇಕಡ 5 ರಷ್ಟು ವರ್ಗಾವಣೆಗೆ ಅವಕಾಶ ಇದೆ. ಏಪ್ರಿಲ್, ಮೇ ಒಳಗೆ ವರ್ಗಾವಣೆ ನಡೆಸುವ ಚಿಂತನೆ ನಡೆದಿದೆ. ಕಡ್ಡಾಯ ಮತ್ತು ಹೆಚ್ಚುವರಿ ಶಿಕ್ಷಕರ ವರ್ಗಾವಣೆಗೆ ಸುಗ್ರಿವಾಜ್ಞೆ ಮೂಲಕ ಪರಿಹಾರ ಕಲ್ಪಿಸಲಾಗುವುದು ಎಂದು ಹೇಳಲಾಗಿದೆ.