ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಡೆಸಿದೆ. ಈ ಬಗ್ಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ ಸಂಪುಟ ಸಭೆಯಲ್ಲಿ ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರಿವಾಜ್ಞೆ ಹೊರಡಿಸಲು ಒಪ್ಪಿಗೆ ಪಡೆಯಲಾಗುವುದು ಎಂದು ಹೇಳಿದ್ದಾರೆ.
ಅನೇಕ ವರ್ಷಗಳಿಂದ ಸಾವಿರಾರು ಶಿಕ್ಷಕರು ವರ್ಗಾವಣೆ ನಿರೀಕ್ಷೆಯಲ್ಲಿದ್ದಾರೆ. ಶಿಕ್ಷಕರಿಗೆ ನೀಡಿದ ಭರವಸೆಯಂತೆ ವರ್ಗಾವಣೆಗೆ ಅವಕಾಶ ಮಾಡಿಕೊಡಲು ಸುಗ್ರೀವಾಜ್ಞೆ ಹೊರಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಪ್ರಶ್ನಿಸಿ ಶಿಕ್ಷಕರೊಬ್ಬರು ಕೆಎಟಿ ಮೊರೆಹೋಗಿದ್ದು, ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಲಾಗಿದೆ. 2016 – 17 ರಲ್ಲಿ ಹೆಚ್ಚುವರಿ ಶಿಕ್ಷಕರು ಎಂದು ಗುರುತಿಸಲಾದ ಕಾರಣಕ್ಕೆ ಕೆಲವರು ಬೇರೆ ತಾಲೂಕಿಗೆ ವರ್ಗಾವಣೆಯಾಗಿ ಸಂಕಷ್ಟದಲ್ಲಿದ್ದಾರೆ. ಕೆಎಟಿ ಆದೇಶದಿಂದ ಕೋರಿಕೆ ಮತ್ತು ಪರಸ್ಪರ ವರ್ಗಾವಣೆ ಕೋರಿ ಅರ್ಜಿ ಸಲ್ಲಿಸಿರುವ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ಅತಂತ್ರ ಸ್ಥಿತಿಯಲ್ಲಿದ್ದಾರೆ. ಹಿನ್ನೆಲೆಯಲ್ಲಿ ಶಿಕ್ಷಕರ ವರ್ಗಾವಣೆ ಕಾಯ್ದೆಗೆ ಸಂಬಂಧಿಸಿದಂತೆ ಮಾರ್ಪಾಡು ಮಾಡಿ ಸುಗ್ರಿವಾಜ್ಞೆ ಹೊರಡಿಸಲಾಗುವುದು ಎಂದು ಹೇಳಲಾಗಿದೆ.