
ಬೆಂಗಳೂರು: ಶಿಕ್ಷಕರ ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಶಿಕ್ಷಕರ ವರ್ಗಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ಆದೇಶ ಹೊರಡಿಸಲಾಗಿದ್ದು, ನವೆಂಬರ್ 24 ರಿಂದ ಸ್ಥಳ ಆಯ್ಕೆಗೆ ಕೌನ್ಸಿಲಿಂಗ್ ನಡೆಯಬೇಕಿತ್ತು. ಆದರೆ, ಕೌನ್ಸೆಲಿಂಗ್ ಅನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ.
ತಾಲೂಕುಗಳಲ್ಲಿ ಕಾರ್ಯನಿರ್ವಹಿಸುವ ಶಿಕ್ಷಕರ ಸಂಖ್ಯೆ ಅನುಸಾರ ಶೇಕಡ 25ರಷ್ಟು ಶಿಕ್ಷಕರ ವರ್ಗಾವಣೆಗೆ ಶಿಕ್ಷಣ ಇಲಾಖೆ ಮುಂದಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಸರ್ಕಾರಿ ನೌಕರರ ಸಂಘ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ತಾಲೂಕಿಗೆ ಮಂಜೂರಾದ ಹುದ್ದೆಗಳಲ್ಲಿ ಶೇಕಡ 25 ರಷ್ಟು ವರ್ಗಾವಣೆ ಮಾಡಬೇಕೆಂದು ಒತ್ತಾಯಿಸಲಾಗಿದೆ.
ಯಾವುದೇ ಘಟಕದಲ್ಲಿ ಮಂಜೂರಾದ ಹುದ್ದೆಗಳ ಸಂಖ್ಯೆಯ ಅನುಸಾರ ಶೇಕಡವಾರು ಲೆಕ್ಕಚಾರ ಮಾಡಬೇಕೆಂದು ಸರ್ಕಾರ ಪರಿಷ್ಕೃತ ಆದೇಶ ಹೊರಡಿಸಿದೆ. ತಾಲೂಕಿಗೆ ಎಷ್ಟು ಶಿಕ್ಷಕರ ಹುದ್ದೆ ಮಂಜೂರಾಗಿದೆ ಎಂಬುದನ್ನು ಪರಿಗಣಿಸಿ ಅದರಲ್ಲಿ ಶೇಕಡ 25ರಷ್ಟು ಹುದ್ದೆಗಳಿಗೆ ವರ್ಗಾವಣೆ ಪ್ರಕ್ರಿಯೆ ನಡೆಸಬೇಕಿದೆ ಎಂದು ಹೇಳಲಾಗಿದೆ.