alex Certify ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್: KAT ಆದೇಶ ಎತ್ತಿ ಹಿಡಿದ ಹೈಕೋರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್: KAT ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕುರಿತಂತೆ ಕೆಎಟಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 2020 -21 ನೇ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೆಚ್ಚುವರಿ ಶಿಕ್ಷಕರಿಗೆ ಆದ್ಯತೆ ನೀಡಬೇಕೆಂದು ಶಿಕ್ಷಣ ಇಲಾಖೆಯ ಆದೇಶವನ್ನು ರದ್ದುಗೊಳಿಸಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ತೀರ್ಪು ನೀಡಿದ್ದು, ಈ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ.

ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ಪೀಠ, ಕರ್ನಾಟಕ ಆಡಳಿತ ನ್ಯಾಯ ಮಂಡಳಿ ಆದೇಶ ಪ್ರಶ್ನಿಸಿ ಶಿಕ್ಷಣ ಇಲಾಖೆ ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದೆ.

ಎಲ್ಲಾ ಶಿಕ್ಷಕರನ್ನು ಸಮಾನವಾಗಿ ಕಾಣಬೇಕು, ತಾರತಮ್ಯ ಮಾಡಬಾರದು ಎಂದು ಹೇಳಲಾಗಿದ್ದು, 2019 – 20 ನೇ ಸಾಲಿನ ಹೆಚ್ಚುವರಿ ಶಿಕ್ಷಕರಿಗೆ ಆದ್ಯತೆ ನೀಡಬೇಕೆಂಬ ಸರ್ಕಾರದ ಆದೇಶ ನ್ಯಾಯಸಮ್ಮತವಾಗಲ್ಲ ಎಂದು ಹೈಕೋರ್ಟ್ ಹೇಳಿದೆ. ಈ ನಡುವೆ ಶಿಕ್ಷಕರ ವರ್ಗಾವಣೆಗೆ ಅನುಕೂಲವಾಗುವಂತೆ ಸುಗ್ರೀವಾಜ್ಞೆ ಹೊರಡಿಸಲು ಚಿಂತನೆ ನಡೆದಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...