ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಕೊನೆಗೂ ಸಿಹಿ ಸುದ್ದಿ ಸಿಕ್ಕಿದೆ. ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ನವೆಂಬರ್ 29 ರಿಂದ ಮತ್ತೆ ಪ್ರಾರಂಭವಾಗಲಿದೆ. ಈ ಕುರಿತಂತೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
ನ. 29 ರಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಆರಂಭವಾಗಲಿದೆ. ಮಂಜೂರಾಗಿರುವ ಹುದ್ದೆಗಳ ಆಧಾರದಲ್ಲಿ ವರ್ಗಾವಣೆ ಮಾಡಲು ಅಗತ್ಯ ತಂತ್ರಾಂಶ ಸಿದ್ಧಪಡಿಸುವ ಕಾರಣದಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು.
ನವೆಂಬರ್ 29 ರಿಂದ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದದ ಸಾಮಾನ್ಯ ಕೋರಿಕೆ ವರ್ಗಾವಣೆ, ಪರಸ್ಪರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ಡಿ. 2 ರಿಂದ ಪ್ರೌಢ ಶಾಲೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಆರಂಭವಾಗಲಿದೆ.
ನಂಬರ್ 29 ರಿಂದ ಡಿಸೆಂಬರ್ 4 ರವರೆಗೆ ಪ್ರಾಥಮಿಕ ಶಿಕ್ಷಕರ ಜಿಲ್ಲೆಯೊಳಗಿನ ಕೋರಿಕೆ ವರ್ಗಾವಣೆ ಗಣಕೀಕೃತ ಕೌನ್ಸಿಲಿಂಗ್ ಮತ್ತು ಸ್ಥಳ ನಿಯುಕ್ತಿ ಪ್ರಕ್ರಿಯೆ ನಡೆಸಲಾಗುವುದು. ಡಿಸೆಂಬರ್ 5 ರಿಂದ ಕನಿಷ್ಠ ಮೂರರಿಂದ ಐದು ವರ್ಷ ಸೇವೆ ಸಲ್ಲಿಸಿದವರು ನಿರ್ದಿಷ್ಟ ಹುದ್ದೆಗಳ ವರ್ಗಾವಣೆಗೆ ಸಲ್ಲಿಸಿದ ಶಿಕ್ಷಕರಿಗೆ ಕೌನ್ಸಿಲಿಂಗ್ ನಡೆಸಲಾಗುತ್ತದೆ.