ಬೆಂಗಳೂರು: ತಾಂತ್ರಿಕ ತೊಂದರೆಯ ಕಾರಣ ನೀಡಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಕೌನ್ಸೆಲಿಂಗ್ ದಿಢೀರ್ ಸ್ಥಗಿತಗೊಳಿಸಿದ್ದರಿಂದ ನೂರಾರು ಶಿಕ್ಷಕರು ಪ್ರತಿಭಟನೆ ನಡೆಸಿದ್ದಾರೆ. ಬೆಂಗಳೂರಿನ ಶಿಕ್ಷಕರ ಸದನದಲ್ಲಿ ಮಂಗಳವಾರ ಕೌನ್ಸೆಲಿಂಗ್ ಗೆ ಹಾಜರಾಗಿದ್ದ ಶಿಕ್ಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಾಂತ್ರಿಕ ಸಮಸ್ಯೆಯ ಕಾರಣ ನೀಡಿ ದಿಢೀರನೆ ವರ್ಗಾವಣೆ ಪ್ರಕ್ರಿಯೆ ರದ್ದುಗೊಳಿಸಿರುವುದಕ್ಕೆ ಶಿಕ್ಷಕ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ. ಸುಮಾರು ಒಂದು ತಿಂಗಳಿನಿಂದ ಸ್ಥಗಿತವಾಗಿದ್ದ ವರ್ಗಾವಣೆ ಪ್ರಕ್ರಿಯೆ ಕಳೆದ ವಾರ ಆರಂಭವಾಗಿತ್ತು. ಮತ್ತೆ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಕೌನ್ಸೆಲಿಂಗ್ ಸ್ಥಗಿತಗೊಳಿಸಲಾಗಿದ್ದು, ಶಿಕ್ಷಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಜನವರಿ 18 ರಿಂದ ಪ್ರೌಢಶಾಲೆ ಸಹಶಿಕ್ಷಕರು, ದೈಹಿಕ ಶಿಕ್ಷಕರು, ವಿಶೇಷ ಶಿಕ್ಷಕರಿಗೆ ಗಣಕೀಕೃತ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ಆರಂಭವಾಗಬೇಕಿದ್ದ ಹಿನ್ನೆಲೆಯಲ್ಲಿ ಶಿಕ್ಷಕರು ಶಿಕ್ಷಕರ ಸದನಕ್ಕೆ ಆಗಮಿಸಿದ್ದರು. ಆದರೆ, ತಾಂತ್ರಿಕ ಕಾರಣ ಅಧಿಕಾರಿಗಳು ಕೌನ್ಸೆಲಿಂಗ್ ಮುಂದೂಡಲಾಗಿದೆ ತಿಳಿಸಿದ್ದಾರೆ.
ತಾಂತ್ರಿಕ ದೋಷದ ಕಾರಣ ವರ್ಗಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಶೀಘ್ರವೇ ಪರಿಷ್ಕೃತ ವೇಳಾಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಹೇಳಲಾಗಿದೆ.