
ಬೆಂಗಳೂರು: ಶಿಕ್ಷಕರು ಉಪನ್ಯಾಸಕರ ವರ್ಗಾವಣೆಗೆ 15 ದಿನ ಗಡುವು ನೀಡಲಾಗಿದ್ದು, 15 ದಿನದೊಳಗೆ ಪ್ರಕ್ರಿಯೆ ಆರಂಭವಾಗದಿದ್ದರೆ ಅನಿರ್ಧಿಷ್ಟಾವಧಿ ಧರಣಿ ನಡೆಸಲು ತೀರ್ಮಾನಿಸಲಾಗಿದೆ.
ರಾಜ್ಯ ಶಿಕ್ಷಕರ, ಉಪನ್ಯಾಸಕರ ಕ್ರಿಯಾ ಸಮಿತಿಯಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆಯಲಾಗಿದೆ. ಮೂರ್ನಾಲ್ಕು ತಿಂಗಳಿನಿಂದ ವರ್ಗಾವಣೆ ಪ್ರಕ್ರಿಯೆ ಆರಂಭಿಸುವಂತೆ ಮನವಿ ಮಾಡಿದ್ದರೂ, ಕಾನೂನು ಪ್ರಕ್ರಿಯೆ ಪರಿಗಣಿಸಿ ವರ್ಗಾವಣೆ ಪ್ರಕ್ರಿಯೆ ಆರಂಭಿಸುವುದಾಗಿ ಹೇಳಲಾಗಿತ್ತು. ಆದರೆ, ಇನ್ನೂ ವರ್ಗಾವಣೆ ಆರಂಭವಾಗಿಲ್ಲ.
ಮುಂದಿನ 15 ದಿನದೊಳಗೆ ಪ್ರಾಥಮಿಕ, ಪ್ರೌಢ ಶಿಕ್ಷಣ ಶಿಕ್ಷಕರು, ಪದವಿಪೂರ್ವ ಉಪನ್ಯಾಸಕರನ್ನು ವರ್ಗಾವಣೆ ಮಾಡಲು ಪ್ರಕ್ರಿಯೆ ಆರಂಭಿಸಬೇಕೆಂದು ಮನವಿ ಮಾಡಲಾಗಿದೆ. ಮುಂದಿನ 15 ದಿನದೊಳಗೆ ಪ್ರಾಥಮಿಕ ಪ್ರೌಢ ಶಿಕ್ಷಣ ಶಿಕ್ಷಕರು ಪದವಿಪೂರ್ವ ಉಪನ್ಯಾಸಕರನ್ನು ವರ್ಗಾವಣೆ ಮಾಡಲು ಪ್ರಕ್ರಿಯೆ ಆರಂಭಿಸಬೇಕೆಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದ್ದು, ಇಲ್ಲದಿದ್ದರೆ, ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿ ಎದುರು ಅನಿರ್ದಿಷ್ಟ ಹೋರಾಟ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.