alex Certify ವರ್ಗಾವಣೆ: ಎ ವಲಯ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ: ಎ ವಲಯ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಸಿಹಿ ಸುದ್ದಿ

ಬೆಂಗಳೂರು: ಎ ವಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರಿಗೆ ಶಿಕ್ಷಣ ಇಲಾಖೆಯಿಂದ ಸಿಹಿ ಸುದ್ದಿ ಸಿಕ್ಕಿದೆ. ಈ ಬಾರಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಎ ವಲಯದ ಶಿಕ್ಷಕರನ್ನು ಬಿ ಅಥವಾ ಸಿ ವಲಯಕ್ಕೆ ವರ್ಗಾವಣೆ ಮಾಡುವುದಿಲ್ಲ.

ಎ ವಲಯದ ಶಿಕ್ಷಕರಿಗೆ ವರ್ಗಾವಣೆ ಇರುವುದಿಲ್ಲ. ಇರುವ ಸ್ಥಳದಲ್ಲೇ ಮುಂದುವರೆಯಲಿದ್ದಾರೆ. ಹೊಸ ಶಿಕ್ಷಕರ ನೇಮಕಾತಿ ಪರಿಣಾಮ ಕಡ್ಡಾಯ ವರ್ಗಾವಣೆಗೂ ಬ್ರೇಕ್ ಬಿದ್ದಿದೆ. ಪ್ರಾಥಮಿಕ ಶಾಲೆಯ 1.53 ಹಾಗೂ ಪ್ರೌಢಶಾಲೆಯ 38,000 ಶಿಕ್ಷಕರಲ್ಲಿ ಸುಮಾರು 50,000 ಶಿಕ್ಷಕರು ಎ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಎಲ್ಲಾ ಸಿದ್ಧತೆ ಮಾಡಿಕೊಂಡು ನಿಯಮ ರೂಪಿಸಲಾಗುತ್ತಿದೆ. ಪೂರ್ಣಗೊಂಡ ನಂತರ ಅಧಿಸೂಚನೆ ಒಂದು ವಾರದಲ್ಲಿ ಹೊರ ಬೀಳುವ ಸಾಧ್ಯತೆ ಇದೆ.

ನಿಯಮದ ಪ್ರಕಾರ ಶಿಕ್ಷಕರನ್ನು ಪ್ರತಿ ಎರಡು ವರ್ಷಕ್ಕೊಮ್ಮೆ ಕಡ್ಡಾಯ ವರ್ಗಾವಣೆ ಮಾಡಲಾಗುತ್ತದೆ. ಕಳೆದ ವರ್ಷ ಕಡ್ಡಾಯ ವರ್ಗಾವಣೆ ಪ್ರಕ್ರಿಯೆ ಕೈಗೊಂಡಿದ್ದ ಕಾರಣ ಈ ವರ್ಷ ಕಡ್ಡಾಯ ವರ್ಗಾವಣೆ ಇರುವುದಿಲ್ಲ. ಶಿಕ್ಷಕರು ಬಯಸಿದಲ್ಲಿ ಮಾತ್ರ ಸಿ ವಲಯಗಳಿಗೆ ವರ್ಗಾವಣೆಗೆ ಅವಕಾಶ ಮಾಡಿಕೊಡಲಾಗುವುದು.

ಹೊಸದಾಗಿ ನೇಮಕವಾದ ಶಿಕ್ಷಕರು ಮೊದಲ 10 ವರ್ಷ ಅವಧಿ ಸಿ ವಲಯದಲ್ಲಿ ಕೆಲಸ ಮಾಡಬೇಕೆಂಬ ನಿಯಮವಿದ್ದು, ಪ್ರಸ್ತುತ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಆಯ್ಕೆಯಾಗುವ 13,363 ಶಿಕ್ಷಕರು ಮೊದಲ 10 ವರ್ಷ ಸಿ ವಲಯದಲ್ಲಿ ಕೆಲಸ ಮಾಡಲು ಸ್ಥಳ ನಿಯೋಜನೆ ಮಾಡಲಾಗುವುದು. ಕಳೆದ ವರ್ಷ ಕಡ್ಡಾಯ ವರ್ಗಾವಣೆಯಲ್ಲಿ ಎ ವಲಯದಿಂದ ಸಿ ವಲಯಕ್ಕೆ ವರ್ಗಾವಣೆಯಾದ ಶಿಕ್ಷಕರು ಕನಿಷ್ಠ ಮೂರು ವರ್ಷ ಸೇವೆ ಸಲ್ಲಿಸಬೇಕಿದ್ದು, ಈ ವರ್ಷ ವರ್ಗಾವಣೆಗೆ ಅವಕಾಶ ಇರುವುದಿಲ್ಲ ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...