ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶಿಕ್ಷಕರ ವರ್ಗಾವಣೆ ಮರು ಹಂಚಿಕೆ ಕೌನ್ಸೆಲಿಂಗ್ ಗೆ ಅರ್ಹರಾದ ಹೆಚ್ಚುವರಿ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಇಂದು ಪ್ರಕಟಿಸಲಾಗುವುದು. ನಾಳೆಯಿಂದ ಬ್ಲಾಕ್ ಹಂತದಲ್ಲಿ ಮರು ಹೊಂದಾಣಿಕೆ ಕೌನ್ಸೆಲಿಂಗ್ ನಡೆಸಲಾಗುವುದು.
10,500 ಹೆಚ್ಚುವರಿ ಶಿಕ್ಷಕರನ್ನು ಗುರುತಿಸಲಾಗಿದೆ. ಈ ಶಿಕ್ಷಕರ ಕೌನ್ಸೆಲಿಂಗ್ ಪ್ರಕ್ರಿಯೆ ನಡೆಸಿ ತಾಲೂಕಿನೊಳಗೆ ವರ್ಗಾವಣೆ ಮಾಡಲಾಗುವುದು. ಹೆಚ್ಚುವರಿ ಶಿಕ್ಷಕರ ವರ್ಗಾವಣೆ ತಾಂತ್ರಿಕ ಸಮಸ್ಯೆ ಪರಿಹರಿಸಿ ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುವುದು.
ಹೆಚ್ಚುವರಿ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮೊದಲು ಬಡ್ತಿ ನೀಡಬೇಕು. ಇಲ್ಲವಾದಲ್ಲಿ ವರ್ಗಾವಣೆ ಪ್ರಕ್ರಿಯೆ ನಿಲ್ಲಿಸಬೇಕು ಎಂದು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ವಿರೋಧ ವ್ಯಕ್ತಪಡಿಸಿದೆ. ಇದರ ನಡುವೆಯೂ ವರ್ಗಾವಣೆ ಪ್ರಕ್ರಿಯೆ ಮುಂದುವರೆದಿದೆ ಎಂದು ಹೇಳಲಾಗಿದೆ.