
ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದ ವೇಳಾಪಟ್ಟಿ ಕಡತಕ್ಕೆ ಅನುಮೋದನೆ ನೀಡಿದ್ದಾರೆ.
ನವೆಂಬರ್ 18 ರಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದೆ. ಮುಂದಿನ ಎರಡು ಮೂರು ದಿನಗಳಲ್ಲಿ ವರ್ಗಾವಣೆ ವೇಳಾಪಟ್ಟಿ ಕುರಿತು ಸುತ್ತೋಲೆ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.