alex Certify ಮೊಬೈಲ್ ನಲ್ಲಿ 300ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆ, ಬಂಧನ ಹಿನ್ನೆಲೆ ಶಿಕ್ಷಕ ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೊಬೈಲ್ ನಲ್ಲಿ 300ಕ್ಕೂ ಅಧಿಕ ಅಶ್ಲೀಲ ವಿಡಿಯೋ ಪತ್ತೆ, ಬಂಧನ ಹಿನ್ನೆಲೆ ಶಿಕ್ಷಕ ಸಸ್ಪೆಂಡ್

ಬೆಳಗಾವಿ: ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ ಮೊಹಮ್ಮದ್ ಸಾಧಿಕ್ ಗೌಸ್ ಮೊಯಿದ್ದೀನ್ ಮಿಯಾ ಬೇಗ್ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಆರೋಪಿ ಮೊಯಿದ್ದೀನ್ ಮೇಲೆ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿ ಶಿಕ್ಷಕನನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಡಿಪಿಐ ಬಿ.ಎ. ಮರಕಣಮರಡಿ ಅವರು ಅಮಾನತು ಆದೇಶ ಹೊರಡಿಸಿದ್ದಾರೆ.

ಚಿಕ್ಕೋಡಿ ಝಾರಿಗಲ್ಲಿಯ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಮೊಯಿದ್ದೀನ್ ಶಾಲೆಯಲ್ಲಿ ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ದೇಹದ ಭಾಗಗಳನ್ನು ಮುಟ್ಟಿ ವಿಕೃತಿ ಮೆರೆಯುತ್ತಿದ್ದ. ಆರೋಪಿ ಮೊಬೈಲ್ ನಲ್ಲಿ 300ಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಕೆಲವು ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳ ಫೋಟೋಗಳು ಇವೆ ಎನ್ನಲಾಗಿದೆ.

ಮೂಲತಃ ಹಾವೇರಿ ಜಿಲ್ಲೆ ಶಿಗ್ಗಾವಿಯ ಶಿಕ್ಷಕ ಮೊಯಿದ್ದೀನ್ 5 ವರ್ಷದಿಂದ ಚಿಕ್ಕೋಡಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಕೃತ್ಯ ಮೇಲ್ನೋಟಕ್ಕೆ ದೃಢಪಟ್ಟಿದೆ. ಆರೋಪಿಯ ಮೊಬೈಲ್ ಸೀಜ್ ಮಾಡಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ. ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...