alex Certify ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್: ಮತದಾನದ ಹಕ್ಕು ಇಲ್ಲ: ಶಿಕ್ಷಕರ ಕ್ಷೇತ್ರ ನಿಯಮ ಬದಲಾವಣೆಗೆ ಹೆಚ್ಚಿದ ಒತ್ತಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಥಮಿಕ ಶಾಲೆ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್: ಮತದಾನದ ಹಕ್ಕು ಇಲ್ಲ: ಶಿಕ್ಷಕರ ಕ್ಷೇತ್ರ ನಿಯಮ ಬದಲಾವಣೆಗೆ ಹೆಚ್ಚಿದ ಒತ್ತಡ

ಬೆಂಗಳೂರು: ರಾಜ್ಯ ವಿಧಾನಪರಿಷತ್ ನಲ್ಲಿ 7 ಶಿಕ್ಷಕರ ಕ್ಷೇತ್ರಗಳು ಇವೆ. ಆದರೆ, ಪ್ರಾಥಮಿಕ ಶಾಲೆಗಳ ಶಿಕ್ಷಕರಿಗೆ ಮಾತ್ರ ಶಿಕ್ಷಕರ ಕ್ಷೇತ್ರದಲ್ಲೇ ಮತದಾನದ ಹಕ್ಕು ಇಲ್ಲವಾಗಿದೆ.

ಶಿಕ್ಷಕರ ಕ್ಷೇತ್ರದಲ್ಲಿ ಪ್ರೌಢಶಾಲೆ ಶಿಕ್ಷಕರು, ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರು, ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳ ಅಧ್ಯಾಪಕರು, ಪ್ರಾಧ್ಯಾಪಕರಿಗೆ ಮತದಾನ ಮಾಡುವ ಅವಕಾಶವಿದೆ. ಆದರೆ ಒಂದರಿಂದ ಏಳನೇ ತರಗತಿಯ ಪ್ರಾಥಮಿಕ ಶಾಲೆ ಶಿಕ್ಷಕರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡಲಾಗಿದೆ.

ಕರ್ನಾಟಕ ಮಾತ್ರವಲ್ಲದೇ, ದೇಶದಲ್ಲಿ ವಿಧಾನಪರಿಷತ್ ಅಸ್ತಿತ್ವದಲ್ಲಿರುವ ಎಲ್ಲಾ ರಾಜ್ಯಗಳ ಶಿಕ್ಷಕರ ಕ್ಷೇತ್ರದಲ್ಲಿಯೂ ಇದೇ ರೀತಿ ಇದೆ ಎನ್ನಲಾಗಿದೆ. ಶಿಕ್ಷಕರ ಕ್ಷೇತ್ರ ಎಂದಿದ್ದರೂ, ಪ್ರಾಥಮಿಕ ಶಾಲೆಗಳ ಶಿಕ್ಷಕರನ್ನು ಮತದಾನದ ಹಕ್ಕಿನಿಂದ ವಂಚಿತರನ್ನಾಗಿ ಮಾಡಲಾಗಿದೆ.

ರಾಜ್ಯದ ಸುಮಾರು 7 ಶಿಕ್ಷಕರ ಕ್ಷೇತ್ರದಲ್ಲಿ ಅಂದಾಜು 4 ಲಕ್ಷ ಶಿಕ್ಷಕರಿಗೆ ಮತದಾನದ ಹಕ್ಕು ಇರುವುದಿಲ್ಲ. ವಿಧಾನಪರಿಷತ್ ನಲ್ಲಿ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಆರಂಭಿಸಿದ ಸಂದರ್ಭದಲ್ಲಿ ಪದವೀಧರ ಮತದಾರರನ್ನು ಮಾತ್ರ ಪರಿಗಣಿಸುವ ನಿಯಮ ರೂಪಿಸಲಾಗಿದೆ. ಪ್ರಾಥಮಿಕ ಶಾಲೆಗಳಿಗೆ ಈ ಹಿಂದೆ ಎಸ್.ಎಸ್.ಎಲ್.ಸಿ., ಟಿಸಿಹೆಚ್ ಆದವರು ಶಿಕ್ಷಕರಾಗುತ್ತಿದ್ದರು. ಹೀಗಾಗಿ ಅವರಿಗೆ ಮತದಾನದ ಅವಕಾಶ ನಿರಾಕರಿಸಲಾಗಿತ್ತು. ಪ್ರಾಥಮಿಕ ಶಾಲೆ ಶಿಕ್ಷಕರನ್ನು ಶಿಕ್ಷಕರ ಕ್ಷೇತ್ರಕ್ಕೆ ಪರಿಗಣಿಸದಿರುವುದು ಸರಿಯಲ್ಲ. ನಿಯಮ ಬದಲಾವಣೆ ಮಾಡಬೇಕು. 18 ವರ್ಷ ಮೇಲ್ಪಟ್ಟವರಿಗೆ ಮತದಾನದ ಹಕ್ಕು ನೀಡಿರುವಾಗ ವಿಧಾನಪರಿಷತ್ ನಲ್ಲಿ ಶಿಕ್ಷಕರನ್ನೇ ಪ್ರತಿನಿಧಿಸುವ ಕ್ಷೇತ್ರಕ್ಕೆ ಪ್ರಾಥಮಿಕ ಶಾಲೆ ಶಿಕ್ಷಕರು ಮತದಾನದಿಂದ ವಂಚಿತರಾಗಿರುವುದು ಸರಿಯಲ್ಲ. ಅವರಿಗೆ ಮತದಾನದ ಹಕ್ಕು ನೀಡುವ ನಿಟ್ಟಿನಲ್ಲಿ ನಿಯಮಗಳಿಗೆ ಬದಲಾವಣೆ ತರಬೇಕೆಂಬ ಒತ್ತಾಯ ಕೇಳಿ ಬಂದಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...