
ಬೆಂಗಳೂರು: ಸರ್ಕಾರಿ ಪ್ರಾಥಮಿಕ ಶಾಲೆಯಿಂದ ಮುಖ್ಯ ಶಿಕ್ಷಕರ ಹುದ್ದೆಗೆ ಮತ್ತು ಮುಖ್ಯ ಶಿಕ್ಷಕರಿಂದ ಹಿರಿಯ ಮುಖ್ಯ ಶಿಕ್ಷಕರ ಹುದ್ದೆಗೆ ಬಡ್ತಿ ನೀಡಲು ಶಿಕ್ಷಣ ಇಲಾಖೆ ವೇಳಾಪಟ್ಟಿ ಪ್ರಕಟಿಸಿದೆ. ಫೆಬ್ರವರಿ 13 ರಿಂದ 26 ರವರೆಗೆ ಕೌನ್ಸೆಲಿಂಗ್ ನಡೆಯಲಿದೆ.
2023 24 ನೇ ಸಾಲಿನಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಗೆ ಸಿ ವೃಂದದ ಹುದ್ದೆಗಳಿಗೆ ಬಡ್ತಿ ನೀಡಲು ಕಳೆದ ತಿಂಗಳು ನಡೆಯಬೇಕಿದ್ದ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಶಿಕ್ಷಣ ಇಲಾಖೆ ಮುಂದೂಡಿತ್ತು. ಹೊಸ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಫೆಬ್ರವರಿ 13 ರಿಂದ 26ರ ವರೆಗೆ ಕೌನ್ಸೆಲಿಂಗ್ ನಡೆಯಲಿದೆ.