ನವದೆಹಲಿ: ಶಿಕ್ಷಕರ ದಿನಾಚರಣೆ ಅಂಗವಾಗಿ ಕೇಂದ್ರ ಸರ್ಕಾರದಿಂದ ಹೊಸ ಯೋಜನೆಯನ್ನು ಘೋಷಣೆ ಮಾಡಲಾಗಿದೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ‘ಪಿಎಂಶ್ರೀ ಯೋಜನೆ’ಯಡಿ 14,500 ಶಾಲೆಗಳ ಉನ್ನತೀಕರಣ ಮಾಡಲಾಗುವುದು. ಈ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಪರಿವರ್ತನೆ ಮಾಡಲಾಗುವುದು.
ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ದೊಡ್ಡ ಘೋಷಣೆ ಮಾಡಿದ್ದಾರೆ. ಇಂದು ಶಿಕ್ಷಕರ ದಿನದಂದು ಹೊಸ ಯೋಜನೆ ಬಗ್ಗೆ ಘೋಷಿಸಲು ನನಗೆ ಸಂತೋಷವಾಗುತ್ತಿದೆ ಎಂದು ಪ್ರಧಾನಿ ಹೇಳಿದ್ದಾರೆ. ಪ್ರಧಾನ ಮಂತ್ರಿ ಸ್ಕೂಲ್ ಫಾರ್ ರೈಸಿಂಗ್ ಇಂಡಿಯಾ(ಪಿಎಂ-ಎಸ್‌ಆರ್‌ಐ) ಯೋಜನೆಯಡಿ ಭಾರತದಾದ್ಯಂತ 14,500 ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುವುದು ಮತ್ತು ಮೇಲ್ದರ್ಜೆಗೇರಿಸಲಾಗುವುದು. ಇವುಗಳು ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಪೂರ್ಣ ಮನೋಭಾವವನ್ನು ಒಳಗೊಂಡಿರುವ ಮಾದರಿ ಶಾಲೆಗಳಾಗುತ್ತವೆ ಎಂದು ತಿಳಿಸಿದ್ದಾರೆ.