ಬೆಂಗಳೂರು : ಸೆ. 5 ರ ಇಂದು ರಾಜ್ಯದ 31 ಶಿಕ್ಷಕರಿಗೆ ‘ಉತ್ತಮ ಶಿಕ್ಷಕ’ ಪ್ರಶಸ್ತಿ’ ಪ್ರದಾನ ಮಾಡಲಾಗುತ್ತಿದ್ದು, ರಾಜ್ಯ ಸರ್ಕಾರ ಶಿಕ್ಷಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2023-24 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.ಈ ಬಗ್ಗೆ ಸರ್ಕಾರದ ಅಧೀನ ಕಾರ್ಯದರ್ಶಿಗಳು ಮಹಾಂತಯ್ಯ ಎಸ್ ಹೊಸಮಠ ಸುತ್ತೋಲೆ ಹೊರಡಿಸಿದ್ದಾರೆ.
ರಾಜ್ಯ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗಾಗಿ ಪ್ರಾಥಮಿಕ ಶಾಲಾ ವಿಭಾಗದಿಂದ 20 ಶಿಕ್ಷಕರು ಮತ್ತು ಪ್ರೌಢಶಾಲಾ ವಿಭಾಗದಿಂದ 11 ಶಿಕ್ಷಕರನ್ನು (ಓರ್ವ ವಿಶೇಷ ಶಿಕ್ಷಕರೂ ಒಳಗೊಂಡಂತೆ) 2023-24 ನೇ ಸಾಲಿಗೆ ಈ ಕೆಳಕಂಡಂತೆ ಆಯ್ಕೆ ಮಾಡಲಾಗಿದೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರು/ಸಹ ಶಿಕ್ಷಕರು/ವಿಶೇಷ ಶಿಕ್ಷಕರು/ಮುಖ್ಯ ಶಿಕ್ಷಕರುಗಳಿಗೆ ಸರ್ಕಾರದ ಆದೇಶ ಸಂಖ್ಯೆ: ಇಪಿ 308 ಪಿಬಿಎಸ್ 2021, ದಿನಾಂಕ: 12.09.2022 ರ ಅನುಸಾರ ತಲಾ ರೂ. 25,000/- ರಂತೆ, ಒಟ್ಟು ರೂ. 7,75,000/- ಗಳ ನಗದು ಪುರಸ್ಕಾರ ನೀಡಲು ಹಾಗೂ ಸದರಿ ವೆಚ್ಚವನ್ನು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ, ಬೆಂಗಳೂರು ಇಲ್ಲಿಂದ ಭರಿಸಲು ಅನುಮತಿ ನೀಡಿ ಆದೇಶ ಹೊರಡಿಸಿದ್ದಾರೆ.