alex Certify ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವುದೇ ಶಿಕ್ಷಕರ ಜವಾಬ್ದಾರಿ: ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ ಸಿದ್ದರಾಮಯ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವುದೇ ಶಿಕ್ಷಕರ ಜವಾಬ್ದಾರಿ: ರೈತ-ಶಿಕ್ಷಕ-ಸೈನಿಕ ದೇಶದ ನಿರ್ಮಾತೃಗಳು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರೈತರು-ಶಿಕ್ಷಕರು-ಸೈನಿಕರು ದೇಶದ ನಿರ್ಮಾತೃಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಉನ್ನತ ಶಿಕ್ಷಣ ಇಲಾಖೆ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಭಾರತ ರತ್ನ ಡಾ.ಸರ್ವೆಪಲ್ಲಿ ರಾಧಾಕೃಷ್ಣನ್ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಮತ್ತು ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ದೇಶದ ಎರಡನೇ ರಾಷ್ಟ್ರಾಧ್ಯಕ್ಷರಾಗಿದ್ದ ರಾಧಾಕೃಷ್ಣನ್ ಅವರು ಶ್ರೇಷ್ಠ ಶಿಕ್ಷಕರಾಗಲು ಸಾಧ್ಯವಾಗಿದೆ ಅಂದರೆ, ಇದೇ ಸಾಧ್ಯತೆ ಎಲ್ಲಾ ಶಿಕ್ಷಕರಿಗೂ ಇದ್ದೇ ಇರುತ್ತದೆ. ಹೀಗಾಗಿ ಪ್ರತಿಯೊಬ್ಬ ಶಿಕ್ಷಕರೂ ರಾಧಾಕೃಷ್ಣನ್ ಅವರ ಮಾರ್ಗದಲ್ಲಿ ನಡೆಯಲು ಪ್ರಯತ್ನಿಸಬೇಕು ಎಂದು ಕರೆ ನೀಡಿದರು.

ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ರೂಪಿಸುವ ಮೂಲಕ ದೇಶದ ವ್ಯಕ್ತಿತ್ವವನ್ನು ರೂಪಿಸುವವರು ನಮ್ಮ ಶಿಕ್ಷಕರು. ಇದು ಶಿಕ್ಷಕರ ಮೂಲಭೂತ ಜವಾಬ್ದಾರಿ. ಆಕಸ್ಮಿಕವಾಗಿ ಶಿಕ್ಷಕ ವೃತ್ತಿಗೆ ಬಂದವರಿಗಿಂತ ಶಿಕ್ಷಕ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರೇ ಅತಿ ಹೆಚ್ಚಾಗಿದ್ದಾರೆ. ಹೀಗೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡವರ ಬಗ್ಗೆ ನನಗೆ ಹೆಮ್ಮೆ ಎನಿಸುತ್ತದೆ ಎಂದರು.

ವಿದ್ಯಾರ್ಥಿಗಳು ಸ್ವತಂತ್ರವಾಗಿ ಯೋಚಿಸುವಂತೆ ಅವರನ್ನು ರೂಪಿಸುವುದೇ ಶಿಕ್ಷಕರ ಜವಾಬ್ದಾರಿ. ವೈಜ್ಞಾನಿಕತೆ ಮತ್ತು ವೈಚಾರಿಕತೆಯನ್ನು ವಿದ್ಯಾರ್ಥಿಗಳು ಬೆಳೆಸಿಕೊಂಡರೆ ಮಾತ್ರ ಅವರಿಗೆ ಸಮಾಜ ಅರ್ಥವಾಗುತ್ತದೆ. ಸಮಾಜದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದರು.

ಕಡ್ಡಾಯ ಶಿಕ್ಷಣದ ಜೊತೆಗೆ ಅತ್ಯುತ್ತಮ ವ್ಯಕ್ತಿತ್ವಗಳನ್ನು ರೂಪಿಸುವ ರೂವಾರಿಗಳು ನಮ್ಮ ಶಿಕ್ಷಕರು. ಮನುಷ್ಯ ಮನುಷ್ಯನನ್ನು ಪ್ರೀತಿಸುವ ಮಾನವೀಯ ಜವಾಬ್ದಾರಿಯನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವುದು ಶಿಕ್ಷಕರಿಂದ, ಶಿಕ್ಷಣದಿಂದ ಮಾತ್ರ ಸಾಧ್ಯ. 800 ವರ್ಷಗಳ ಹಿಂದೆಯೇ ಕರ್ಮ ಸಿದ್ಧಾಂತವನ್ನು ಬಸವಾದಿ ಶರಣರು ತಿರಸ್ಕರಿಸಿದ್ದರು. ಆದರೂ ಇವತ್ತಿನ ಶಿಕ್ಷಕರೂ ಹಣೆಬರಹ ಮುಂತಾದ ಕರ್ಮಸಿದ್ಧಾಂತವನ್ನು ನಂಬುತ್ತಾರೆ. ಇದು ಸರಿಯಲ್ಲ. ಸಾವಿತ್ರಿ ಬಾಯಿ ಫುಲೆ, ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳು ಇಡೀ ಶಿಕ್ಷಕ ಸಮುದಾಯಕ್ಕೆ ಮಾದರಿಯಾಗಲಿ ಎಂದು ಹಾರೈಸುತ್ತೇನೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...