ಬೆಂಗಳೂರು: ಶಿಕ್ಷಕರ ನಿಯೋಜನೆ ರದ್ದು ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ನಿಯೋಜನೆಯ ಮೇಲೆ ಕಾರ್ಯನಿರ್ವಹಿಸುತ್ತಿರುವ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರು ತಕ್ಷಣದಿಂದಲೇ ಜಾರಿಗೆ ಬರುವಂತೆ ಮೂಲ ಶಾಲೆಗಳಲ್ಲಿ ಕರ್ತವ್ಯಕ್ಕೆ ಹಾಜರಾಗಲು ಕ್ರಮಕೈಗೊಳ್ಳಲು ಸೂಚಿಸಲಾಗಿದೆ.
ಕೆಲ ಡಿಡಿಪಿಐ ಮತ್ತು ಬಿಇಒಗಳು ಮಕ್ಕಳ ಶೈಕ್ಷಣಿಕ ಹಿತಾಸಕ್ತಿ ಪರಿಗಣಿಸದೆ ಇಲಾಖೆ ನಿಯಮಗಳನ್ನು ಕೂಡ ಉಲ್ಲಂಘಿಸಿ ಶಿಕ್ಷಕರನ್ನು ನಿಯೋಜನೆ ಮಾಡಿರುವುದು ಕಂಡುಬಂದಿದೆ. ಅಂತಹ ಡಿಡಿಪಿಐ ಮತ್ತು ಬಿಇಒಗಳ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ ಎನ್ನಲಾಗಿದೆ.