ಬೆಂಗಳೂರು: ಜೂನ್ ನಲ್ಲಿ ನಡೆಯುವ SSLC ಪರೀಕ್ಷೆ -2ಗೆ ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ವಿಶೇಷ ತರಗತಿಗಳನ್ನು ನಡೆಸುವ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ಶಿಕ್ಷಕರಿಗೆ ಕಡಿತವಾಗುವ ಬೇಸಿಗೆ ರಜಾ ದಿನಗಳಿಗೆ ಬದಲಾಗಿ ಗಳಿಕೆ ರಜೆ ಪಡೆಯಲು ಸರ್ಕಾರ ಅವಕಾಶ ನೀಡಿದೆ.
ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ಫೇಲ್ ಆಗಿರುವ ವಿದ್ಯಾರ್ಥಿಗಳಿಗೂ ಇದೇ ಅವಧಿಯಲ್ಲಿ ವಿಶೇಷ ತರಗತಿಗಳನ್ನು ನಡೆಸಲು ಆಯಾ ಆಡಳಿತ ಮಂಡಳಿಗಳು ಕ್ರಮ ವಹಿಸಬೇಕೆಂದು ಶಿಕ್ಷಣ ಇಲಾಖೆ ಸೂಚಿಸಿದೆ.
14 ದಿನದ ಬೇಸಿಗೆ ರಜಾ ದಿನಗಳು ಕಡಿತಕೊಳ್ಳುವ ಹಿನ್ನೆಲೆಯಲ್ಲಿ ಶಿಕ್ಷಕರ ವಲಯದಿಂದ ವಿರೋಧ ವ್ಯಕ್ತವಾಗಿತ್ತು. ಹೀಗಾಗಿ ಶಿಕ್ಷಕರ ಓಲೈಕೆಗೆ ಸರ್ಕಾರ ಮುಂದಾಗಿದ್ದು, ಕಡಿತವಾಗುವ ಬೇಸಿಗೆ ರಜೆ ದಿನಗಳನ್ನು ಗಳಿಕೆ ರಜೆಯಾಗಿ ಪರಿವರ್ತಿಸಿಕೊಳ್ಳಬಹುದಾಗಿದೆ.