alex Certify ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ, ಆಕ್ಷೇಪಣೆ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಿಕ್ಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ: ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ, ಆಕ್ಷೇಪಣೆ ಆಹ್ವಾನ

ಕಲಬುರಗಿ: ಕಲಬುರಗಿ ಜಿಲ್ಲೆಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಇಡಿ./ಬಿ.ಪಿ.ಇಡಿ. ತರಬೇತಿ ಪಡೆದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರು ಗ್ರೇಡ್-2 ಹಾಗೂ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1 ಹುದ್ದೆಗೆ ಬಡ್ತಿ ನೀಡಲು 2020ನೇ ಬ್ಲಾಕ್ ಅವಧಿಯ (2020ರ ಜನವರಿ 1 ರಿಂದ ಡಿಸೆಂಬರ್ 31ರವರೆಗೆ) ತಾತ್ಕಾಲಿಕ ಅಂತಿಮ ಜೇಷ್ಠತಾ ಪಟ್ಟಿಯನ್ನು ವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಸಂಬಂಧಪಟ್ಟ ಶಿಕ್ಷಕರು ಈ ತಾತ್ಕಾಲಿಕ ಅಂತಿಮ ಜೇಷ್ಠತಾ ಪಟ್ಟಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ   ddpikalaburagi.in./GraduateTech.aspx  ವೆಬ್‍ಸೈಟ್‍ನಲ್ಲಿ ವೀಕ್ಷಿಸಬಹುದಾಗಿದೆ. ಈ ತಾತ್ಕಾಲಿಕ ಅಂತಿಮ ಪಟ್ಟಿಯಲ್ಲಿ ನಮೂದಿಸಿದ ಸೇವಾ ವಿವರಗಳ ಕುರಿತು ಏನಾದರು ಆಕ್ಷೇಪಣೆಗಳಿದ್ದಲ್ಲಿ ವೆಬ್‍ಸೈಟ್‍ದಲ್ಲಿ ಪ್ರಕಟಿಸಿದ ಆಕ್ಷೇಪಣೆ ನಮೂನೆಯಲ್ಲಿ ಆಕ್ಷೇಪಣೆಗಳನ್ನು ಪೂರಕ ದಾಖಲೆಗಳೊಂದಿಗೆ ಇದೇ ಫೆಬ್ರವರಿ 12ರೊಳಗಾಗಿ ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಸಲ್ಲಿಸಬೇಕು.

ಈ ತಾತ್ಕಾಲಿಕ ಅಂತಿಮ ಜೇಷ್ಠತಾ ಪಟ್ಟಿಯಲ್ಲಿ ಸ್ಥಾನ ಪಡೆಯದೇ ಇರುವ ಹಾಗೂ ದಿ. 31-12-2020 ರವರೆಗೆ ಬಿ.ಇಡಿ./ಬಿ.ಪಿ.ಇಡಿ. ತರಬೇತಿಯ ಫಲಿತಾಂಶ ಪ್ರಕಟಿಸಿ ಈ ವಿದ್ಯಾರ್ಹತೆ ಹೊಂದಿರುವ ಶಿಕ್ಷಕರು ಜೇಷ್ಠತಾ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಪ್ರಸ್ತಾವನೆಗಳನ್ನು ವೆಬ್‍ಸೈಟ್‍ದಲ್ಲಿ ಪ್ರಕಟಿಸಿದ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿ ಪ್ರತಿಯೊಂದು ವಿವರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ಸಂಬಂಧಪಟ್ಟ ಆಯಾ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ  ಇದೇ ಫೆಬ್ರವರಿ 10 ರೊಳಗಾಗಿ ಸಲ್ಲಿಸಬೇಕು. ತಾತ್ಕಾಲಿಕ ಅಂತಿಮ ಜೇಷ್ಠತಾ ಪಟ್ಟಿಯಲ್ಲಿ ಈಗಾಗಲೇ ಸ್ಥಾನ ಪಡೆದುಕೊಂಡಿರುವ ಶಿಕ್ಷಕರು ಪುನಃ ಪ್ರಸ್ತಾವನೆ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಅವರು ಉಪನಿರ್ದೇಶಕರು ಸ್ಪಷ್ಟಪಡಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...