ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ನೂತನ ಕೇಂದ್ರ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಮೊದಲಿಗೆ ನಾರಾಯಣ ರಾಣೆ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ನೂತನ ಸಚಿವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರಮಾಣವಚನ ಬೋಧಿಸಿದ್ದಾರೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.
ಸರ್ಬಾನಂದ್ ಸೋನೋವಾಲ್ ಅವರು ಎರಡನೇಯವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು. ನಂತರ ಡಾ. ವೀರೇಂದ್ರ ಕುಮಾರ್, ಜ್ಯೋತಿರಾಧಿತ್ಯ ಸಿಂಧ್ಯಾ ಪ್ರಮಾಣ ವಚನ ಸ್ವೀಕರಿಸಿದರು.