ತನ್ನ ಟೈಟಲ್ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದ ಕರ್ವ ನವನೀತ್ ನಿರ್ದೇಶನದ ‘ಛೂ ಮಂತರ್’ ಚಿತ್ರದ ಟೀಸರ್ ನಿನ್ನೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದ್ದು, ನೋಡುಗರಲ್ಲಿ ಕುತೂಹಲ ಕೆರಳಿಸಿದೆ.
ಈ ಟೀಸರ್ ಗೆ ಸಾಕಷ್ಟು ಮೆಚ್ಚುಗೆ ದೊರೆತಿದ್ದು, ಕೆಲವೇ ಗಂಟೆಗಳಲ್ಲಿ ಭರ್ಜರಿ ವೀಕ್ಷಣೆ ಪಡೆದುಕೊಂಡಿದೆ. ಇದರ ಜೊತೆಗೆ ಬಿಡುಗಡೆ ದಿನಾಂಕವನ್ನು ಘೋಷಣೆ ಮಾಡಲಾಗಿದ್ದು ಜನವರಿ 10 ಕ್ಕೆ ರಿಲೀಸ್ ಆಗಲಿದೆ.
ಶರಣ್ ನಟನೆಯ ಈ ಚಿತ್ರದಲ್ಲಿ ಅದಿತಿ ಪ್ರಭುದೇವ, ಮೇಘನಾ ಗಾಂವ್ಕರ್, ಚಿಕ್ಕಣ್ಣ ತೆರೆ ಹಂಚಿಕೊಂಡಿದ್ದು, ತರುಣ್ ಸ್ಟುಡಿಯೋಸ್ ಬ್ಯಾನರ್ ನಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಾಣ ಮಾಡಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ, ಡಾ. ಕೆ ರವಿವರ್ಮ ಸಾಹಸ ನಿರ್ದೇಶನ, ದರ್ಶಿನಿ ಡೆಲ್ಟಾ ನಾಗರಾಜ್ ಅವರ ನೃತ್ಯ ನಿರ್ದೇಶನ, ವೆಂಕಿ UDV ಸಂಕಲನವಿದೆ.