![](https://kannadadunia.com/wp-content/uploads/2023/10/a9cfc687-8cb1-42ee-af69-fe51104c5c5e-1024x577.jpg)
ಸೂರಿ ಕುಂದರ್ ನಿರ್ದೇಶನದ ಬಹು ನಿರೀಕ್ಷಿತ ಜಿಗರ್ ಚಿತ್ರದ ಟೀಸರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಅಶ್ವಿನಿ ಪುನೀತ್ ರಾಜಕುಮಾರ್ ಅವರು ಟೀಸರ್ ಲಾಂಚ್ ಮಾಡುವ ಮೂಲಕ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದೆ.
ಈ ಚಿತ್ರದಲ್ಲಿ ಪ್ರವೀಣ್ ತೇಜ್ ಹಾಗೂ ವಿಜಯ್ ಶ್ರೀ ನಾಯಕ ನಾಯಕಿಯಾಗಿದ್ದು, ಯುಕೆ ಪ್ರೊಡಕ್ಷನ್ ಲಾಂಛನದಲ್ಲಿ ಪೂಜಾ ವಸಂತ್ ಕುಮಾರ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಮುರಳಿಧರ್ ಸಂಗೀತ ಸಂಯೋಜನೆ ನೀಡಿದ್ದು ಶಿವಸೇನಾ ಅವರ ಛಾಯಾಗ್ರಹಣವಿದೆ.