![ಸೆಪ್ಟೆಂಬರ್ ನಲ್ಲಿ ತೆರೆಕಾಣಲಿದೆ 'ಲವ್' ಸಿನಿಮಾ | Kannada Dunia | Kannada News | Karnataka News | India News](https://kannadadunia.com/wp-content/uploads/2023/08/94b65d3f-94cb-49ca-8f7a-ca430e814665.jpg)
ತನ್ನ ಹಾಡುಗಳ ಮೂಲಕವೇ ಸಿನಿ ಪ್ರೇಕ್ಷಕರ ಗಮನ ಸೆಳೆದಿರುವ ಮಹೇಶ್ ಸಿ. ಅಮ್ಮಳ್ಳಿದೊಡ್ಡಿ ನಿರ್ದೇಶನದ ‘ಲವ್’ ಸಿನಿಮಾ ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದ್ಯಂತ ತೆರೆ ಮೇಲೆ ಬರಲು ಸಿದ್ದವಾಗಿದ್ದು, ಇಂದು ಈ ಚಿತ್ರದ ಟೀಸರ್ ಬಿಡುಗಡೆ ಮಾಡಲಾಗಿದೆ.
ಟೀಸರ್ ಬಿಡುಗಡೆಯಾದ ಕೆಲವೇ ಕ್ಷಣಗಳಲ್ಲಿ ಸಾಕಷ್ಟು ವೀಕ್ಷಣೆ ಪಡೆದಿದ್ದು, ನೋಡುಗರಿಂದ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಯುವ ಪ್ರತಿಭೆಗಳ ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಲಿ ಎಂದು ಹಾರೈಸಿದ್ದಾರೆ.
ಶ್ರೀ ಕಾಳ ಭೈರವ ಮೂವಿ ಮೇಕರ್ಸ್ ಲಾಂಛನದಲ್ಲಿ ದಿವಾಕರ್ ಎಸ್. ನಿರ್ಮಾಣ ಮಾಡಿರುವ ಈ ಚಿತ್ರದಲ್ಲಿ ಪ್ರಜಯ್ ಜೈರಾಮ್ ಹಾಗೂ ರುಷ ಪಾಟೀಲ್ ಮುಖ್ಯ ಭೂಮಿಕೆಯಲ್ಲಿದ್ದು, ಸಾಯಿ ಶ್ರೀ ಕಿರಣ್ ಸಂಗೀತ ಸಂಯೋಜನೆ ನೀಡಿದ್ದಾರೆ. ಇದೊಂದು ಪಕ್ಕಾ ಲವ್ ಸ್ಟೋರಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ ಎಂದು ಹೇಳಲಾಗಿದೆ