ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಾರತ್ತಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ಅತುಲ್ ಸುಭಾಷ್ ಪತ್ನಿ ನಿಖಿತಾ ಸಿಂಘಾನಿಯಾ, ಅತ್ತೆ ನಿಶಾ ಸಿಂಘಾನಿಯಾ ಮತ್ತು ನಿಖಿತಾ ಸೋದರ ಅನುರಾಗ್ ಸಿಂಘಾನಿಯಾ ಅವರನ್ನು ಬಂಧಿಸಿದ್ದಾರೆ.
ಹರಿಯಾಣದ ಗುರುಗ್ರಾಮದಲ್ಲಿ ನಿಖಿತಾರನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ನಿಶಾ ಮತ್ತು ಅನುರಾಗ್ ಅವರನ್ನು ಬಂಧಿಸಲಾಗಿದೆ.
ಡಿಸೆಂಬರ್ 9 ರಂದು ಡೆತ್ ನೋಟ್ ಬರೆದಿಟ್ಟು ಅತುಲ್ ಸುಭಾಷ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಡೆತ್ ನೋಟ್ ನಲ್ಲಿ ಪತ್ನಿ ಕಿರುಕುಳದ ಬಗ್ಗೆ ಉಲ್ಲೇಖಿಸಿದ್ದರು.