ಬೆಂಗಳೂರು: ಬೆಂಗಳೂರಿನಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರತ್ತಹಳ್ಳಿ ಠಾಣೆ ಪೊಲೀಸರು ಉತ್ತರ ಪ್ರದೇಶದ ಜೌನ್ಪುರದಲ್ಲಿ ಅತ್ತೆ ಮತ್ತು ಬಾಮೈದನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಅತುಲ್ ಪತ್ನಿ ನಿಖಿತಾ ಕುಟುಂಬದವರ ಮೇಲೆ ಎಫ್ಐಆರ್ ದಾಖಲಿಸಲಾಗಿದ್ದು, ಉತ್ತರ ಪ್ರದೇಶದ ಜೌನ್ಪುರದಲ್ಲಿ ಅತ್ತೆ ನಿಶಾ ಸಿಂಘಾನಿಯಾ, ಬಾಮೈದ ಅನುರಾಗ್ ಸಿಂಘಾನಿಯಾ ಅವರನ್ನು ಪೊಲೀಸರು ವಶಕ್ಕೆ ಪಡೆದು ಜೌನ್ಪುರ ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ.
ಇಂದು ನ್ಯಾಯಾಲಯದ ಅನುಮತಿ ಪಡೆದು ಇಬ್ಬರನ್ನು ಬೆಂಗಳೂರಿಗೆ ಕರೆತರಲಾಗುವುದು. ಅವರ ಬಂಧನಕ್ಕೆ ಪೊಲೀಸರು ದೆಹಲಿಗೆ ತೆರಳಿದ್ದಾಗ ಮನೆಗೆ ಬೀಗ ಹಾಕಿಕೊಂಡು ಇಬ್ಬರು ಪರಾರಿಯಾಗಿದ್ದರು. ಸಿಸಿ ಟಿವಿ ದೃಶ್ಯಾವಳಿ ಆಧರಿಸಿ ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ.