ಬೆಂಗಳೂರು: ಬೆಂಗಳೂರಿನ ಮಾರತ್ತಹಳ್ಳಿಯಲ್ಲಿ ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅತುಲ್ ಪತ್ನಿ ಸೇರಿ ನಾಲ್ವರು ಸಂಬಂಧಿಕರ ವಿರುದ್ಧ ದೂರು ದಾಖಲಾಗಿದೆ.
ಅತುಲ್ ಸಹೋದರ ವಿಕಾಸ್ ಕುಮಾರ್ ನೀಡಿದ ದೂರಿನ ದೂರಿನ ಅನ್ವಯ ಅತುಲ್ ಪತ್ನಿ ನಿಖಿತಾ, ತಾಯಿ ನಿಶಾ, ಸಹೋದರ ಅನುರಾಗ್ ಮತ್ತು ಸಂಬಂಧಿ ಸುಶೀಲ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಅತುಲ್ ದಂಪತಿಗೆ ಒಂದು ಗಂಡು ಮಗು ಇದೆ. ಪ್ರಕರಣದ ಇತ್ಯರ್ಥಕಾಗಿ 3 ಕೋಟಿ ರೂಪಾಯಿ ಹಣಕ್ಕಾಗಿ ಒತ್ತಾಯ ಮಾಡುತ್ತಿದ್ದರು. ಮಗನ ಭೇಟಿಗೆ ಅವಕಾಶ ನೀಡಲು 30 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದರು. ಇಲ್ಲದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮೂದಲಿಸಿದ್ದರು. ಇದರಿಂದ ಮಾನಸಿಕವಾಗಿ, ದೈಹಿಕವಾಗಿ ನೊಂದು ಅತುಲ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅತುಲ್ ಸಹೋದರ ನೀಡಿದ ದೂರಿನ ಅನ್ವಯ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.