ಹಾಸನ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತಿರುವವರ ಸಂಖ್ಯೆ ಹೆಚ್ಚುತ್ತಿದೆ. ನೀರು ಕುಡಿಯುತ್ತಿದ್ದ ಸಾಫ್ಟ್ ವೇರ್ ಇಂಜಿನಿಯರ್ ಓರ್ವ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ರಾಮೇನಹಳ್ಳಿಯಲ್ಲಿ ನಡೆದಿದೆ.
26 ವರ್ಷದ ಸಮರ್ಥ್ ಮೃತ ಯುವಕ. ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಸಮರ್ಥ, ಕೆಲ ತಿಂಗಳಿಂದ ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ. ಮಲಗಿದ್ದವನು ಮೇಲೆದ್ದು ನೀರು ಕುಡಿಯುತ್ತಿದ್ದ ವೇಳೆ ಏಕಾಏಕಿ ಕುಸಿದು ಬಿದ್ದಿದ್ದಾನೆ. ತಕ್ಷಣ ದ್ಸಮರ್ಥ್ ತಾಯಿ ಪತಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ.
ವೈದ್ಯರನ್ನು ಕರೆತಂದು ತಪಾಸಣೆ ಮಾಡಲಾಗಿದೆ. ಅಷ್ಟರಲ್ಲಿ ಸಮರ್ಥ ಕೊನೆಯುಸಿರೆಳೆದಿದ್ದ. ಹೃದಯಾಘಾತದಿಂದ ಯುವಕ ಸಾವನ್ನಪ್ಪಿದ್ದಾಗಿ ವೈದ್ಯರು ದೃಢಪಡಿಸಿದ್ದಾರೆ. ವಯಸ್ಸಿಗೆ ಬಂದ ಮಗನನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.