ಬೆಂಗಳೂರು: ಚುನಾವಣಾ ವೀಕ್ಷಕರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು ದಾಖಲಾಗಿದೆ.
ಕಾಂಗ್ರೆಸ್ ನಾಯಕರ ನಿಯೋಗ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಶಾಸಕ ರವಿ ಸುಬ್ರಹ್ಮಣ್ಯ ವಿರುದ್ಧವೂ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದೆ.
ದೂರು ನೀಡಿದ ಬಳಿಕ ಮಾತನಾಡಿದ ಎಂಎಲ್ ಸಿ ಯು.ಬಿ.ವೆಂಕಟೇಶ್, ಸಂಸದ ತೇಜಸ್ವಿ ಸೂರ್ಯ ಚುನಾವಣಾ ಅಧಿಕಾರಿಯನ್ನು ತಳ್ಳಿ, ದೌರ್ಜನ್ಯ ನಡೆಸಿದ್ದಾರೆ. ತೇಜಸ್ವಿ ಸೂರ್ಯಗೆ ತುಂಬಾ ದುರಹಂಕಾರ. ಕೇವಲ ಹಣಬಲ ಮದಬಲದಿಂದ ಚುನಾವಣೆ ಗೆಲ್ಲೋಕೆ ಆಗಲ್ಲ. ಈ ರೀತಿ ದೌರ್ಜನ್ಯದಿಂದ ಚುನಾವಣೆ ಎದುರಿಸಬೇಕಾ? ಈ ಹಿನ್ನೆಲೆಯಲ್ಲಿ ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಹ್ಮಣ್ಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮುಖ್ಯ ಚುನಾವಣಾ ಅಧಿಕಾರಿಗಳಿಗೆ ದೂರು ನೀಡಿದ್ದೇವೆ ಎಂದು ತಿಳಿಸಿದ್ದಾರೆ.