ಕನ್ನಡಿಗರಿಗೆ ಗುಡ್ ನ್ಯೂಸ್: ಕನ್ನಡದಲ್ಲೇ ಪರೀಕ್ಷೆ ಬರೆಯಲು ರೈಲ್ವೆ ಇಲಾಖೆ ಅವಕಾಶ

ನೈರುತ್ಯ ರೈಲ್ವೆ ನಡೆಸಲಿರುವ ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸಲು ರೈಲ್ವೆ ಇಲಾಖೆ ಅವಕಾಶ ಕಲ್ಪಿಸಿದೆ.

ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು, ಕನ್ನಡದಲ್ಲಿಯೇ ನೈರುತ್ಯ ರೈಲ್ವೆ ವಲಯದ ಲೋಕೋ ಪೈಲೆಟ್ ಹುದ್ದೆಗಳ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡುವಂತೆ ಮನವಿ ಮಾಡಿದ್ದು, ಇದಕ್ಕೆ ರೈಲ್ವೆ ಇಲಾಖೆ ಸ್ಪಂದಿಸಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದೆ.

ಇದರಿಂದಾಗಿ ರಾಜ್ಯದ ಅಭ್ಯರ್ಥಿಗಳಿಗೆ ಅನುಕೂಲವಾಗಲಿದ್ದು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಅವರಿಗೆ ತೇಜಸ್ವಿ ಸೂರ್ಯ ಧನ್ಯವಾದ ಹೇಳಿದ್ದಾರೆ.

ಲೋಕೋ ಪೈಲಟ್ ಹುದ್ದೆಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅರ್ಜಿ ಸ್ವೀಕರಿಸಿದ್ದ ನೈರುತ್ಯ ರೈಲ್ವೆ ಸುತ್ತೋಲೆಯಲ್ಲಿ ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಷರತ್ತು ವಿಧಿಸಿತ್ತು. ಇದರಿಂದಾಗಿ ಬಡ್ತಿಗಾಗಿ ಕನ್ನಡದಲ್ಲಿ ಪರೀಕ್ಷೆ ಬರೆಯಲು ಸಿದ್ಧತೆ ನಡೆಸಿದ ರೈಲ್ವೆ ಉದ್ಯೋಗಿಗಳಿಗೆ ಸಂಕಷ್ಟ ಎದುರಾಗಿತ್ತು.

“ನೈಋತ್ಯ ರೈಲ್ವೆ ವತಿಯಿಂದ ನಡೆಯಬೇಕಿದ್ದ ಲೋಕೋ ಪೈಲಟ್ ಹುದ್ದೆಗಳ ಪರೀಕ್ಷಾ ಸುತ್ತೋಲೆಯಲ್ಲಿ ಕನ್ನಡಕ್ಕೆ ಅವಕಾಶ ನೀಡದಿರುವುದನ್ನು ಇಂದು ರೈಲ್ವೆ ಇಲಾಖೆ ರಾಜ್ಯ ಸಚಿವ ವಿ. ಸೋಮಣ್ಣ ಅವರ ಗಮನಕ್ಕೆ ತಂದಿದ್ದು, ಕನ್ನಡದಲ್ಲಿಯೂ ಪರೀಕ್ಷೆಗೆ ಅವಕಾಶ ಕಲ್ಪಿಸುವಂತೆ ಮಾಡಿದ್ದ ಮನವಿಯನ್ನು ತಕ್ಷಣವೇ ಪುರಸ್ಕರಿಸಿ ಆದೇಶ ಹೊರಡಿಸಿರುವುದು ಅಭಿನಂದನಾರ್ಹ ಕ್ರಮ.

ಕರ್ನಾಟಕ & ಕನ್ನಡಿಗರ ಹಿತಾಸಕ್ತಿಯ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಎಂದೆಂದಿಗೂ ಕಟಿಬದ್ಧವಾಗಿದೆ. ಇದರಿಂದ ಮಾತೃಭಾಷೆ ಕನ್ನಡದಲ್ಲಿ ಪರೀಕ್ಷೆ ಬರೆಯಲಿರುವ ಪರೀಕ್ಷಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ತುರ್ತಾಗಿ ಸ್ಪಂದಿಸಿ ಕ್ರಮ ಕೈಗೊಂಡಿರುವ ನಮ್ಮ ಕನ್ನಡದವರೇ ಆದ ಸಚಿವ ವಿ. ಸೋಮಣ್ಣ ಅವರಿಗೆ ಸಮಸ್ತ ಕನ್ನಡಿಗರ ಪರವಾಗಿ ಧನ್ಯವಾದಗಳು” ಎಂದು ತೇಜಸ್ವಿ ಸೂರ್ಯ ತಿಳಿಸಿದ್ದಾರೆ.

https://twitter.com/Tejasvi_Surya/status/1819306252150948026

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read