
ಸಂಗಾರೆಡ್ಡಿ: ತೆಲಂಗಾಣದ ಸಂಗಾರೆಡ್ಡಿಯಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಇಂದು ಸಂಭವಿಸಿದ ಬೆಂಕಿಯಿಂದ ಉಂಟಾದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ಇನ್ನೂ ಹಲವರು ಸಿಕ್ಕಿಬಿದ್ದಿದ್ದಾರೆ. ಮೃತವರ ಸಂಖ್ಯೆ ಬಹುಶಃ ತೀವ್ರವಾಗಿ ಹೆಚ್ಚಾಗಬಹುದು. ಸ್ಫೋಟದ ವೇಳೆ ಕಟ್ಟಡದಲ್ಲಿ 50 ಮಂದಿ ಇದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತಪಟ್ಟವರಲ್ಲಿ ಒಬ್ಬರು ಕಾರ್ಖಾನೆಯ ವ್ಯವಸ್ಥಾಪಕರು ಎಂದು ಹೇಳಲಾಗಿದೆ. ಕಟ್ಟಡದಲ್ಲಿರುವ ಮತ್ತೊಂದು ರಿಯಾಕ್ಟರ್ ಸ್ಫೋಟಗೊಳ್ಳುವ ಆತಂಕವಿದೆ ಎಂದು ಹೇಳಲಾಗಿದ್ದು, ಸುತ್ತಮುತ್ತಲಿನ ಪ್ರದೇಶಗಳಿಂದ ಜನರನ್ನು ಸ್ಥಳಾಂತರಿಸಲಾಗಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.