ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಶುಕ್ರವಾರ ಸಂಜೆ ಲಾರಿ ಆಟೋರಿಕ್ಷಾ ಮತ್ತು ಮೋಟಾರ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ.
ಜಿಲ್ಲೆಯ ಬಾಲಾನಗರ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಘಟನೆಯ ನಂತರ, ಈ ಪ್ರದೇಶದಲ್ಲಿ ಪ್ರತಿಭಟನೆಗಳು ಭುಗಿಲೆದ್ದವು ಮತ್ತು ಘಟನೆಯಲ್ಲಿ ಭಾಗಿಯಾಗಿದ್ದ ಲಾರಿಗೆ ಜನರು ಬೆಂಕಿ ಹಚ್ಚಿದರು, ಇದು ಹೆದ್ದಾರಿಯಲ್ಲಿ ಭಾರಿ ಸಂಚಾರ ದಟ್ಟಣೆಗೆ ಕಾರಣವಾಯಿತು.
ಪೊಲೀಸರು ಸ್ಥಳಕ್ಕೆ ತಲುಪಿ, ಪರಿಸ್ಥಿತಿಯನ್ನು ಶಾಂತಗೊಳಿಸಿದರು ಮತ್ತು ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ.