
ಹೈದರಾಬಾದ್: ಕಂಟೇನರ್ ಡಿಕ್ಕಿಯಾಗಿ ಆಟೋದಲ್ಲಿದ್ದ 9 ಕೂಲಿಕಾರ್ಮಿಕರು ಮೃತಪಟ್ಟ ಘಟನೆ ತೆಲಂಗಾಣದ ನಲಗೊಂಡ ಜಿಲ್ಲೆಯ ಅಂಗಡಿಪೇಟ್ ಬಳಿ ನಡೆದಿದೆ.
ಮೃತಪಟ್ಟ ಕಾರ್ಮಿಕರು ಚಿಂತಾಬಾವಿ ಗ್ರಾಮದವರೆಂದು ಹೇಳಲಾಗಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು ದೇವರಕೊಂಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ.