ಹೈದರಾಬಾದ್: ಪ್ರವಾದಿ ಮೊಹಮ್ಮದ್ ಪೈಗಂಬರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ತೆಲಂಗಾಣ ಬಿಜೆಪಿ ಶಾಸಕ ಟಿ.ರಾಜಾ ಸಿಂಗ್ ಅವರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಪ್ರವಾದಿ ಮೊಹಮ್ಮದ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾಗಿರುವ ರಾಜಾ ಸಿಂಗ್ ಅವರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ರಾಜಾ ಸಿಂಗ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಹೈದರಾಬಾದ್ ಪೊಲೀಸ್ ಕಮಿಷ್ನರ್ ಕಚೇರಿ ಎದುರು ನಿನ್ನೆ ಪ್ರತಿಭಟನೆ ನಡೆದಿತ್ತು.
ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡಿದ್ದಾರೆ ಎಂದು ಆರೋಪಿಸಿ ರಾಜಾ ಸಿಂಗ್ ಅವರನ್ನು ಬಂಧಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದರು. ಪ್ರತಿಭಟನೆ ಬೆನ್ನಲ್ಲೇ ಬಿಜೆಪಿ ಶಾಸಕರ ವಿರುದ್ಧ ಕೇಸ್ ದಾಖಲಾಗಿತ್ತು. ಇದೀಗ ಹೈದರಾಬಾದ್ ಪೊಲೀಸರು ಶಾಸಕ ರಾಜಾ ಸಿಂಗ್ ಅವರನ್ನು ಬಂಧಿಸಿದ್ದಾರೆ.