ಬೀದಿ ನಾಯಿಗಳ ದಾಳಿಗೆ ಬಲಿಯಾಗುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಆತಂಕಕಾರಿಯಾಗಿದೆ. ಇತ್ತೀಚೆಗಷ್ಟೇ ಗುಜರಾತಿನ ಸೂರತ್ ನಲ್ಲಿ ಬೀದಿ ನಾಯಿಗಳ ಕಡಿತಕ್ಕೊಳಗಾಗಿ ನಾಲ್ಕು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಹಿಂದೆಯೇ ಈಗ ಮತ್ತೊಂದು ಪ್ರಕರಣ ಮರುಕಳಿಸಿದೆ.
ತೆಲಂಗಾಣದ ನಿಜಾಮಾಬಾದ್ ನಲ್ಲಿ ಈ ಘಟನೆ ನಡೆದಿದ್ದು, ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಪ್ರದೀಪ್ ಎಂಬ ಬಾಲಕ ಬಲಿಯಾಗಿದ್ದಾನೆ. ಈತ ತನ್ನ ತಂದೆ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಕಟ್ಟಡದ ಬಳಿ ಆಟವಾಡುತ್ತಿದ್ದಾಗ ಮೂರು ಬೀದಿ ನಾಯಿಗಳು ಏಕಾಏಕಿ ದಾಳಿ ನಡೆಸಿವೆ.
https://twitter.com/SmRtysai/status/1627887151344910337