ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಎ ರೇವಂತ್ ರೆಡ್ಡಿ ಶುಕ್ರವಾರ ತಮ್ಮ ಲೋಕಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ರಾಜೀನಾಮೆ ಸಲ್ಲಿಸಿದರು. ಹೊಸದಾಗಿ ಚುನಾಯಿತರಾದ ತೆಲಂಗಾಣ ಮುಖ್ಯಮಂತ್ರಿ ಶುಕ್ರವಾರ ಸಂಜೆ ಲೋಕಸಭೆ ಸ್ಪೀಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು. ಅವರು ತೆಲಂಗಾಣದ ಮಲ್ಕಾಜ್‌ಗಿರಿ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.
ನಾನು 8ನೇ ಡಿಸೆಂಬರ್ 2023 ರಿಂದ ಜಾರಿಗೆ ಬರುವಂತೆ ಸಂಸತ್ತಿನ, ಲೋಕಸಭೆಯ ಸದಸ್ಯತ್ವಕ್ಕೆ ನನ್ನ ರಾಜೀನಾಮೆಯನ್ನು ಈ ಮೂಲಕ ಸಲ್ಲಿಸುತ್ತೇನೆ. ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಿ ಎಂದು ರೆಡ್ಡಿ ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರೇವಂತ್ ರೆಡ್ಡಿ ಅವರು ಗುರುವಾರ ತೆಲಂಗಾಣ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಅವರು ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕೊಡಂಗಲ್ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.