
ನವದೆಹಲಿ: ಕೇಂದ್ರ ಗೃಹಸಚಿವ ಅಮಿತ್ ಶಾ ಭಾಷಣ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಸಿಎಂ ರೇವಂತ್ ರೆಡ್ದಿಗೆ ಸಮನ್ಸ್ ಜಾರಿ ಮಾಡಲಾಗಿದೆ.
ಎಸ್ ಸಿ, ಎಸ್ ಟಿ, ಒಬಿಸಿ ಮೀಸಲಾತಿ ತೆಗೆದು ಹಾಕುತ್ತೇವೆ ಎಂಬ ರೀತಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಹೇಳಿಕೆಯನ್ನು ತಿರುಚಿ ವಿಡಿಯೋ ಮಾಡಲಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಹೇಮಂತ್ ರೆಡ್ಡಿಗೆ ದೆಹಲಿ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ಅಲ್ಲದೇ ಅವರು ಬಳಸಿದ ಎಲ್ಲಾ ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳನ್ನು ತರುವಂತೆ ಸೂಚಿಸಲಾಗಿದೆ.