alex Certify ಹೃದಯಾಘಾತವಾಗಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡುವಾಗಲೇ ವೈದ್ಯನಿಗೂ ಹಾರ್ಟ್ ಅಟ್ಯಾಕ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯಾಘಾತವಾಗಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡುವಾಗಲೇ ವೈದ್ಯನಿಗೂ ಹಾರ್ಟ್ ಅಟ್ಯಾಕ್…!

ಹೈದರಾಬಾದ್: ಹೃದಯಾಘಾತವಾಗಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡುತ್ತಿದ್ದಾಗಲೇ ವೈದ್ಯನಿಗೂ ಹೃದಯಾಘಾತವಾಗಿ ಇಬ್ಬರೂ ಮೃತಪಟ್ಟ ಘಟನೆ ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯಲ್ಲಿ ನಡೆದಿದೆ.

ಗಾಂಧಾರಿ ಮಂಡಲದ ಗುಜ್ಜು ತಂಡ ಪ್ರದೇಶದ ಸರ್ಜು ಎಂಬ ವ್ಯಕ್ತಿಗೆ ಭಾನುವಾರ ಬೆಳಗ್ಗೆ ಹೃದಯಾಘಾತವಾಗಿದೆ. ಕೂಡಲೇ ಕುಟುಂಬದವರು ಗಾಂಧಾರಿ ಪ್ರದೇಶದ ಖಾಸಗಿ ನರ್ಸಿಂಗ್ ಹೋಂಗೆ ಕರೆದುಕೊಂಡು ಹೋಗಿದ್ದಾರೆ. ವೈದ್ಯ ಡಾ. ಲಕ್ಷ್ಮಣ್ ಚಿಕಿತ್ಸೆ ನೀಡುತ್ತಿದ್ದ ಸಂದರ್ಭದಲ್ಲಿ ಅವರಿಗೂ ಕೂಡ ಹೃದಯಾಘಾತವಾಗಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ವೈದ್ಯ ಮೃತಪಟ್ಟಿದ್ದರಿಂದ ಕುಟುಂಬದವರು ಸರ್ಜುನನ್ನು ಕಾಮಾರೆಡ್ಡಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಆತನೂ ಮೃತಪಟ್ಟಿದ್ದಾರೆ. ಮೆಹಬೂಬಾಬಾದ್ ನ ಲಕ್ಷ್ಮಣ್ ನಿಜಾಮಾಬಾದ್ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿದ್ದು, ಗಾಂಧಾರಿ ಮಂಡಲದಲ್ಲಿ ಖಾಸಗಿ ಆಸ್ಪತ್ರೆ ನಿರ್ವಹಿಸುತ್ತಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...