ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಗೆ ಇಂದು ಮತದಾನ ನಡೆಯಲಿದೆ. ಬಿ.ಆರ್.ಎಸ್., ಕಾಂಗ್ರೆಸ್, ಬಿಜೆಪಿ ನಡುವೆ ತೀವ್ರ ಪೈಪೋಟಿ ಇದ್ದು, ಬೆಳಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.
ಇದರೊಂದಿಗೆ ಪಂಚ ರಾಜ್ಯಗಳ ಚುನಾವಣೆಗೆ ತೆರೆ ಬೀಳಲಿದೆ. ವಿಜೋರಾಂ, ಛತ್ತೀಸ್ ಗಢ, ರಾಜಸ್ಥಾನ, ಮಧ್ಯಪ್ರದೇಶ ಚುನಾವಣೆಗಳು ಎರಡು ತಿಂಗಳ ಅವಧಿಯಲ್ಲಿ ಪೂರ್ಣಗೊಂಡಿದ್ದು, ಎಲ್ಲಾ ಐದು ರಾಜ್ಯಗಳ ಚುನಾವಣೆ ಫಲಿತಾಂಶ ಡಿಸೆಂಬರ್ 3ರಂದು ಪ್ರಕಟವಾಗಲಿದೆ.
ತೆಲಂಗಾಣದ 119 ಕ್ಷೇತ್ರಗಳಲ್ಲಿ ಇಂದು ಮತದಾನ ನಡೆಯಲಿದ್ದು, 2290 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 3.13 ಕೋಟಿ ಮತದಾರರು ಮತ ಚಲಾಯಿಸಲಿದ್ದಾರೆ. ಪ್ರಸ್ತುತ ಬಿ.ಆರ್.ಎಸ್. ತೆಲಂಗಾಣದಲ್ಲಿ ಅಧಿಕಾರದಲ್ಲಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕೂಡ ಅಧಿಕಾರಕ್ಕೇರುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಿವೆ.