ಹೈದರಾಬಾದ್: ಅಲ್ಪಸಂಖ್ಯಾತ ಸಮುದಾಯದ ಅರ್ಹ ಕುಟುಂಬಕ್ಕೆ 1 ಲಕ್ಷ ರೂ. ಆರ್ಥಿಕ ನೆರವು ಒದಗಿಸಲು ತೆಲಂಗಾಣ ಸರ್ಕಾರ ಆದೇಶ ಹೊರಡಿಸಿದೆ.
ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವಂತೆಯೇ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ನೇತೃತ್ವದ ಆಡತಾತರೂಢ ಬಿ.ಆರ್.ಎಸ್. ಸರ್ಕಾರ ಅಲ್ಪಸಂಖ್ಯಾತರ ಮನವೊಲಿಕೆಗೆ ಮುಂದಾಗಿದೆ.
ಹಿಂದುಳಿದ ವರ್ಗಗಳಿಗೆ ಈಗಾಗಲೇ ಆರ್ಥಿಕ ಸಹಾಯ ಯೋಜನೆ ಜಾರಿಯಲ್ಲಿದ್ದು, ಅದೇ ಮಾದರಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಅರ್ಹ ಕುಟುಂಬಕ್ಕೆ ಒಂದು ಲಕ್ಷ ರೂ. ಆರ್ಥಿಕ ನೆರವು ಒದಗಿಸಲು ಆದೇಶ ಹೊರಡಿಸಲಾಗಿದೆ.
ತೆಲಂಗಾಣ ಅಲ್ಪಸಂಖ್ಯಾತರ ಹಣಕಾಸು ನಿಗಮದಡಿಯಲ್ಲಿ ಅರ್ಹ ಅಲ್ಪಸಂಖ್ಯಾತ ಕುಟುಂಬಕ್ಕೆ 1 ಲಕ್ಷ ನೆರವು ಒದಗಿಸಲಾಗುತ್ತದೆ. 21 ರಿಂದ 55 ವರ್ಷ ವಯಸ್ಸಿನ ಒಂದು ಕುಟುಂಬದ ಒಬ್ಬ ವ್ಯಕ್ತಿಗೆ ಈ ಆರ್ಥಿಕ ನೆರವು ಸಿಗಲಿದೆ ಎಂದು ಹೇಳಲಾಗಿದೆ.
ಅಲ್ಪಸಂಖ್ಯಾತ ಸಮುದಾಯಗಳಿಗೆ ಶೇ 100ರಷ್ಟು ಸಹಾಯಧನದೊಂದಿಗೆ 1 ಲಕ್ಷ ರೂ. ಆರ್ಥಿಕ ನೆರವು ನೀಡಲು ತೆಲಂಗಾಣ ಸರ್ಕಾರ ಭಾನುವಾರ ಆದೇಶ ಹೊರಡಿಸಿದೆ. ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ಅಲ್ಪಸಂಖ್ಯಾತರಿಗೆ ಆರ್ಥಿಕ ಸಹಾಯವನ್ನು ವಿಸ್ತರಿಸುವ ನಿರ್ಧಾರವು ದೇಶದ ಅಲ್ಪಸಂಖ್ಯಾತ ಸಮುದಾಯಗಳ ಆರ್ಥಿಕ ಸ್ವಾವಲಂಬನೆಯನ್ನು ಸಾಧಿಸುವ ನಿಟ್ಟಿನಲ್ಲಿ ಮತ್ತೊಂದು ಐತಿಹಾಸಿಕ ಮೈಲಿಗಲ್ಲನ್ನು ಅನಾವರಣಗೊಳಿಸಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.