alex Certify SHOCKING: ಟಾಯ್ಲೆಟ್ ಕ್ಲೀನರ್ ಕುಡಿಸಿ ಗರ್ಭಿಣಿ ಜೀವ ತೆಗೆದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಟಾಯ್ಲೆಟ್ ಕ್ಲೀನರ್ ಕುಡಿಸಿ ಗರ್ಭಿಣಿ ಜೀವ ತೆಗೆದ ಪತಿ

ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಗರ್ಭಿಣಿ ಪತ್ನಿಗೆ ಟಾಯ್ಲೆಟ್ ಕ್ಲೀನರ್ ಕುಡಿಸಿದ ಪತಿ ಆಕೆ ಮೃತಪಟ್ಟ ಬಳಿಕ ಪರಾರಿಯಾಗಿದ್ದಾನೆ.

ನಿಜಾಮಾಬಾದ್‌ನ ವರ್ಣಿ ಮಂಡಲದ ರಾಜಪೇಟ್ ತಾಂಡಾದಲ್ಲಿ ಈ ಘಟನೆ ನಡೆದಿದೆ. ಆರೋಪಿ ಪರಾರಿಯಾಗಿದ್ದು, ಆತನ ಪತ್ತೆಗೆ ಪೊಲೀಸರು ತಂಡ ರಚಿಸಿದ್ದಾರೆ.

ತರುಣ್ ಕೊಲೆ ಆರೋಪಿ. ಮೃತ ಕಲ್ಯಾಣಿಯನ್ನು ನಾಲ್ಕು ವರ್ಷಗಳ ಹಿಂದೆ ವಿವಾಹವಾಗಿದ್ದ. ಮೂರು ತಿಂಗಳ ಹಿಂದೆ ಕಲ್ಯಾಣಿ ಗರ್ಭಿಣಿಯಾದಾಗ ತರುಣ್ ಆಕೆಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದ. ಅವಳು ನೋಡಲು ಚೆನ್ನಾಗಿಲ್ಲ ಎಂದು ಹೀಯಾಳಿಸಿ, ಹೆಚ್ಚಿನ ವರದಕ್ಷಿಣೆ ಹಣ ತರುವಂತೆ ಪೀಡಿಸುತ್ತಿದ್ದ ಎಂದು ವರ್ಣಿ ಪೊಲೀಸರು ತಿಳಿಸಿದ್ದಾರೆ.

ಇಬ್ಬರ ನಡುವೆ ವಾಗ್ವಾದ ನಡೆದ ನಂತರ ತರುಣ್ ಕಲ್ಯಾಣಿಗೆ ಟಾಯ್ಲೆಟ್ ಕ್ಲೀನಿಂಗ್ ಲಿಕ್ವಿಡ್ ಕುಡಿಸಿದ್ದು, ಆಕೆ ತೀವ್ರ ಅಸ್ವಸ್ಥಳಾಗಿದ್ದರಿಂದ ಆಕೆಯ ಕುಟುಂಬದವರು ಚಿಕಿತ್ಸೆಗಾಗಿ ನಿಜಾಮಾಬಾದ್‌ನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಮೃತಪಟ್ಟಿದ್ದಾಳೆ. ಕಲ್ಯಾಣಿ ಸಂಬಂಧಿಕರು ತರುಣ್ ಮತ್ತು ಆತನ ಕುಟುಂಬದ ವಿರುದ್ಧ ದೂರು ದಾಖಲಿಸಿದ್ದಾರೆ.

ದೂರಿನ ಆಧಾರದ ಮೇಲೆ ಪೊಲೀಸರು ತರುಣ್ ಮತ್ತು ಅವರ ಕುಟುಂಬದ ಇಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಆರೋಪಿಗಳು ಪರಾರಿಯಾಗಿದ್ದು, ಅವರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...