ತೆಲಂಗಾಣದ ಮೆಹಬೂಬಾಬಾದ್‌ನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಮಟನ್ ಕರಿ ಮಾಡಿಕೊಡಲು ನಿರಾಕರಿಸಿದ್ದಕ್ಕೆ ಕೋಪಗೊಂಡ ಪತಿಯೊಬ್ಬ ತನ್ನ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಮೃತಳನ್ನು 35 ವರ್ಷದ ಮಲೋತ್ ಕಲಾವತಿ ಎಂದು ಗುರುತಿಸಲಾಗಿದೆ.
ಬುಧವಾರ ತಡರಾತ್ರಿ ಈ ಘಟನೆ ಸಂಭವಿಸಿದ್ದು, ಪತಿ ಮತ್ತು ಪತ್ನಿಯ ನಡುವೆ ಮಾಂಸದ ಅಡುಗೆ ವಿಚಾರಕ್ಕೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ತಿರುಗಿ ಪತಿ, ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಕಲಾವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಕಲಾವತಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.