ಹೈದರಾಬಾದ್: ದೇಶದಲ್ಲಿ ಕೊರೋನಾ ಎರಡನೇ ಅಲೆ ಇಳಿಮುಖವಾಗುತ್ತಿದ್ದು, ಅನೇಕ ರಾಜ್ಯಗಳಲ್ಲಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ.
ಶಾಲೆ, ಕಾಲೇಜ್ ಸೇರಿ ಬಹುತೇಕ ಚಟುವಟಿಕೆ ಬಂದ್ ಆಗಿದ್ದು, ಅಗತ್ಯ ಸೇವೆಗಳೊಂದಿಗೆ ಕೆಲವು ಚಟುವಟಿಕೆಗೆ ಅವಕಾಶ ನೀಡಲಾಗಿದೆ. ದೇಶದಲ್ಲಿಯೇ ಮೊದಲ ಬಾರಿಗೆ ತೆಲಂಗಾಣದಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ. ನಾಳೆಯಿಂದ ತೆಲಂಗಾಣದಲ್ಲಿ ಲಾಕ್ಡೌನ್ ಸಂಪೂರ್ಣ ತೆರವುಗೊಳಿಸಲು ತೆಲಂಗಾಣ ಸರ್ಕಾರ ನಿರ್ಧಾರ ಕೈಗೊಂಡಿದೆ.
ಜುಲೈ 1 ರಿಂದ ತರಗತಿ ನಡೆಸಲು ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಭೌತಿಕ ತರಗತಿಗೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ. ಈ ಮೂಲಕ ದೇಶದಲ್ಲಿ ಶಾಲೆ ಆರಂಭಿಸುತ್ತಿರುವ ಮೊದಲ ರಾಜ್ಯ ತೆಲಂಗಾಣವಾಗಿದೆ. ಈಗಲೇ ಶಾಲಾ ಆರಂಭ ಸೂಕ್ತವಲ್ಲ ಎಂದು ಕೊರೊನಾ ಟಾಸ್ಕ್ ಫೋರ್ಸ್ ಮುಖ್ಯಸ್ಥ ವಿ.ಕೆ. ಪೌಲ್ ಹೇಳಿದ್ದರು. ಹೀಗಿದ್ದರೂ ತೆಲಂಗಾಣದಲ್ಲಿ ಶಾಲೆಗಳನ್ನು ಆರಂಭಿಸಲಾಗುತ್ತಿದೆ ಎಂದು ಹೇಳಲಾಗಿದೆ.