alex Certify BREAKING: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಮಂದಿ ಸ್ಥಳದಲ್ಲೇ ಸಾವು

ಸೂರ್ಯಪೇಟ್: ತೆಲಂಗಾಣದ ಸೂರ್ಯಪೇಟ್ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಕಾರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದು ಕಾರ್ ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಕೆಟ್ಟು ನಿಂತಿದ್ದರಿಂದ ಚಾಲಕ ರಸ್ತೆಯಲ್ಲೇ ನಿಲ್ಲಿಸಿದ್ದಾನೆ. ಹೈದರಾಬಾದ್‌ನಿಂದ ವಿಜಯವಾಡಕ್ಕೆ ತೆರಳುತ್ತಿದ್ದ ಎಕ್ಸ್‌ಎಲ್‌6 ವಾಹನದಲ್ಲಿ ಎಂಟು ಮಂದಿ ಪ್ರಯಾಣಿಸುತ್ತಿದ್ದರು. ವೇಗವಾಗಿ ಬಂದ ಕಾರ್  ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಪ್ರಯಾಣಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ಎರಡು ದಿನಗಳ ಹಿಂದೆ ಸೂರ್ಯಪೇಟೆಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನವದಂಪತಿಗಳು ಸಾವನ್ನಪ್ಪಿದ್ದರು. ಸೂರ್ಯಪೇಟ್ ಜಿಲ್ಲೆಯ ಮುನಗಲ್ ಮಂಡಲದ ಮುಕುಂದಪುರಂನ ಉಪನಗರದ ಪೆಟ್ರೋಲ್ ಬಂಕ್‌ನಲ್ಲಿ ನಿಂತಿದ್ದ ಕಂಟೈನರ್ ಲಾರಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ನವ ದಂಪತಿ ಪ್ರಾಣ ಕಳೆದುಕೊಂಡಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...