ಹೈದರಾಬಾದ್: ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಿದ್ದು, ಈ ಹಿನ್ನೆಲೆಯಲ್ಲಿ ಹಾಲಿ ಸಿಎಂ ಬಿಆರ್ ಎಸ್ ಪಕ್ಷದ ಕೆ.ಚಂದ್ರಶೇಖರ್ ರಾವ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಹೈದರಾಬಾದ್ ನ ಟಿಪಿಸಿಸಿ ಭವನದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆ ನಡೆಯಲಿದೆ.
ಶಾಸಕಾಂಗ ಪಕ್ಷದ ನಾಯಕನನ್ನಾಗಿ ರೇವಂತ್ ರೆಡ್ಡಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ದಟ್ಟವಾಗಿದ್ದು, ನಾಳೆ ಸಂಜೆಯೇ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.