
ಹೈದರಾಬಾದ್: ತೆಲಂಗಾಣದಲ್ಲಿ ಮತ ಎಣಿಕೆ ನಡೆಯುತ್ತಿದ್ದಾಗಲೇ ಹಿಂಸಾಚಾರ ನಡೆದಿದೆ. ಸಚಿವರ ಕಾರಿನ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದಾರೆ.
ಸಚಿವ ನಿರಂಜನ್ ರೆಡ್ಡಿ ಕಾರಿನ ಮೇಲೆ ಅಪರಿಚಿತರ ಗುಂಪು ಕಲ್ಲು ತೂರಾಟ ನಡೆಸಿದೆ. ತೆಲಂಗಾಣದ ವನಪರ್ತಿ ಬಳಿ ಈ ಘಟನೆ ನಡೆದಿದೆ.
ತೆಲಂಗಾಣದಲ್ಲಿ ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, 66 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಆಡಳಿತಾರೂಢ ಬಿಆರ್ ಎಸ್ 39 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದೆ.