![](https://kannadadunia.com/wp-content/uploads/2019/12/cold-in-Hubballi-Dec-22-2014-enarada.COM_.jpg)
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಇಳಿಕೆಯಾಗುತ್ತಿದ್ದು, ಕೊರೆಯುವ ಚಳಿಗೆ ಜನರು ಗಡ ಗಡ ನಡುಗುವಂತಾಗಿದೆ. ಶೀತ ಗಾಳಿ ಬೀಸುತ್ತಿರುವ ಪರಿಣಾಮ ಕಳೆದ ಒಂದು ವಾರದಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಮಧ್ಯಾಹ್ನ 12 ಗಂಟೆಯಾದರೂ, ಚಳಿ ಬಿಡುತ್ತಿಲ್ಲ.
ಕಳೆದ ಕೆಲ ದಿನಗಳಿಂದ ಗಢ-ಗಢ ಚಳಿಗೆ ಜನರು ನಡುಗುತ್ತಿದ್ದಾರೆ. ಡಿಸೆಂಬರ್ ಮೊದಲ ವಾರದಿಂದ ಎಲ್ಲೆಡೆ ಶೀತಗಾಳಿ ಬೀಸುತ್ತಿದೆ. ಮಲೆನಾಡು, ಉತ್ತರ ಕರ್ನಾಟಕ ಭಾಗದಲ್ಲಂತೂ ದಟ್ಟ ಚಳಿಗೆ ಜನರು ತತ್ತರಿಸಿದ್ದಾರೆ. ಬೀದರ್ ನಲ್ಲಿ ಕಡಿಮೆ ಉಷ್ಟಾಂಶ ದಾಖಲಾಗಿದೆ. ಬೀದರ್‌ನಲ್ಲಿ ಅತೀ ಕಡಿಮೆ ಎಂದರೆ 10.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 12.1 ಡಿಗ್ರಿ, ರಾಯಚೂರಿಯಲ್ಲಿ 13.8 ಡಿಗ್ರಿ ಧಾರವಾಡದಲ್ಲಿ15 ಡಿಗ್ರಿ, ಬಾಗಲಕೋಟೆಯಲ್ಲಿ 15.3 ಡಿಗ್ರಿ, ಕಲಬುರಗಿ- ಬೆಳಗಾವಿಯಲ್ಲಿ 15.6 ಡಿಗ್ರಿ, ಗದಗದಲ್ಲಿ 15.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.