ಬೆಂಗಳೂರು: ರಾಜ್ಯದಲ್ಲಿ ಇನ್ನೂ 3 ಡಿಗ್ರಿ ಸೆಲ್ಸಿಯಸ್ ನಷ್ಟು ಉಷ್ಣಾಂಶ ಹೆಚ್ಚಳವಾಗುವ ಸಾಧ್ಯತೆ ಇದೆ. ರಾಜ್ಯದ ಕರಾವಳಿ ಪ್ರದೇಶ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಉಷ್ಣಾಂಶ ಹೆಚ್ಚಳವಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ.
ಕರಾವಳಿಯ ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಧಾರವಾಡ, ಗದಗ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ಯಾದಗಿರಿ, ಕಲಬುರಗಿ, ದಕ್ಷಿಣ ಒಳನಾಡಿನ ಚಿತ್ರದುರ್ಗ, ಹಾಸನ, ಮೈಸೂರು, ಶಿವಮೊಗ್ಗ, ಬಳ್ಳಾರಿ, ವಿಜಯನಗರ ಜಿಲ್ಲೆಯ ಕೆಲವೆಡೆ ಗರಿಷ್ಠ ಉಷ್ಣಾಂಶ ಮೂರು ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಲಾಗಿದೆ.